February 2, 2026

ಬಳ್ಳಾರಿ ಯೂತ್ ಕಾಂಗ್ರೆಸ್ ಅಧ್ಯಕ್ಷನಿಗೆ ಮೊಹಮ್ಮದ್ ನಲಪಾಡ್ ಬೆಂಬಲಿಗರಿಂದ ಹಲ್ಲೆ: ಆರೋಪ

0
image_editor_output_image1939792231-1642663114209.jpg

ಬೆಂಗಳೂರು: ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಬೆಂಬಲಿಗರು ಬಳ್ಳಾರಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಸದ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿರುವ ರಕ್ಷಾ ರಾಮಯ್ಯ ಅಧಿಕಾರವು ಜನವರಿ 30 ರಂದು ಮುಕ್ತಾಯವಾಗಲಿದೆ. ನಂತರ ಅಧ್ಯಕ್ಷ ಸ್ಥಾನ ನಲಪಾಡ್ ಗೆಹಸ್ತಾಂತರವಾಗಬೇಕಿದೆ. ಹೀಗಾಗಿ ಬುಧವಾರ ಬೆಂಗಳೂರಿನ ಖಾಸಗಿ ಹೋಟೆಲ್ ನ್ಲಿ ನಲಪಾಡ್ ಡಿನ್ನರ್ ಆಯೋಜಿಸಿದ್ದರು. ಸಭೆಯಲ್ಲಿ ಎಲ್ಲಾ ಜಿಲ್ಲೆಯ ಮುಖಂಡರು ಭಾಗವಹಿಸಿದ್ದರು. ಈ ವೇಳೆ ಜಟಾಪಟಿ ನಡೆದಿದೆ.

ಬಳ್ಳಾರಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಅವರು ರಕ್ಷಾ ರಾಮಯ್ಯ ಬೆಂಬಲಿಗ ಎಂಬ ಕಾರಣಕ್ಕೆ ನಲಪಾಡ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!