February 2, 2026

ವಿಟ್ಲ: ಪಟ್ಟಣ ಪಂಚಾಯತ್ ಸಿಬ್ಬಂದಿ ಆತ್ಮಹತ್ಯೆ ಯತ್ನ:
ಸಮಗ್ರ ತನಿಖೆಗೆ SDPI ಆಗ್ರಹ

0
image_editor_output_image-1365279132-1642645876695

ವಿಟ್ಲ: ಪಟ್ಟಣ ಪಂಚಾಯತ್ ನ ಸಿಬ್ಬಂದಿಯೋರ್ವರು ಬಿಜೆಪಿಯ ಮಾಜಿ ಸದಸ್ಯನ ಕಿರುಕುಳ ಮತ್ತು ಆರೋಪದಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವನ್ನು ಸಮಗ್ರ ತನಿಖೆ ನಡೆಸುವಂತೆ ಎಸ್ ಡಿಪಿಐ ಆಗ್ರಹಿಸಿದೆ.

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ಸಿಬ್ಬಂದಿ ಯಾಗಿರುವ ರಾಜೇಶ್ ಎಂಬವರ ವಿರುದ್ಧ ಬಿಜೆಪಿ ಬೆಂಬಲಿತ ಮಾಜಿ ಪಂಚಾಯತ್ ಸದಸ್ಯರೋರ್ವರು ಮನೆ ಮಂಜೂರಾತಿ ವಿಚಾರಕ್ಕೆ ಸಂಬಂಧಿಸಿ ಸುಳ್ಳು ಭ್ರಷ್ಟಾಚಾರ ಆರೋಪವನ್ನು ಹೊರಿಸಿ ಮಾನಸಿಕ ಕಿರುಕುಳ ನೀಡಿದ್ದರಿಂದ ಮಾನಸಿಕವಾಗಿ ನೋವನುಭವಿಸಿ ಈ ಬಗ್ಗೆ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಈ ಘಟನೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಿ ಆತ್ಮಹತ್ಯೆ ಯತ್ನಕ್ಕೆ ಕಾರಣರಾದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವಿಟ್ಲ ಪಟ್ಟಣ ಪಂಚಾಯತ್ ಸಮಿತಿ ಕಾರ್ಯದರ್ಶಿ ಸಿರಾಜ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!