February 3, 2026

ವಿಟ್ಲದಲ್ಲಿ ವಾರಾಂತ್ಯ ಕರ್ಫ್ಯೂ ವೇಳೆ ವ್ಯಾಪಾರ ನಡೆಸಲು ಅನುಮತಿ ನೀಡುವಂತೆ ವಿಟ್ಲ ವರ್ತಕ ಸಂಘದಿಂದ ಮನವಿ

0
IMG_20220120_213541.jpg

ವಿಟ್ಲ: ವಾರಾಂತ್ಯ ಕರ್ಫ್ಯೂ ವೇಳೆ ವಿಟ್ಲದ ಎಲ್ಲಾ ವರ್ತಕರಿಗೆ ವ್ಯಾಪಾರ ನಡೆಸಲು ಅನುಮತಿ ನೀಡುವಂತೆ ವಿಟ್ಲ ಪಟ್ಟಣ ಪಂಚಾಯಿತಿಗೆ ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ವಾರಾಂತ್ಯ ಕರ್ಫ್ಯೂ ವೇಳೆ ಅಗತ್ಯ ವಸ್ತುಗಳ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿದೆ. ಆದರೆ ಸಣ್ಣ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶವಿಲ್ಲ. ಕಳೆದ ಎರಡು ಲಾಕ್ ಡೌನ್‌ನಿಂದ ಸಣ್ಣ ವ್ಯಾಪಾರಿಗಳು ಬಾರೀ ತೊಂದರೆ ಅನುಭವಿಸುತ್ತಿದ್ದಾರೆ. ಅಂಗಡಿ ಬಾಡಿಗೆ ಕಟ್ಟಲು ಕೂಡಾ ಪರದಾಟ ನಡೆಸುವಂತಾಗಿದೆ ಆದುದರಿಂದ ಸಣ್ಣ ವ್ಯಾಪಾರಿಗಳು ಕೋವಿಡ್ ನಿಯಮ ಪಾಲಿಸಿಕೊಂಡು ವ್ಯಾಪಾರ ನಡೆಸಲಿದ್ದು, ಈ ಸಂಘದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ತಾವುಗಳು ಅನುಮತಿ ನೀಡಬೇಕಾಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭ ವಿಟ್ಲ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಾಬು ಕೆ.ವಿ, ಕಾರ್ಯದರ್ಶಿ ಕ್ಲಿಫರ್ಡ್ ವೇಗಸ್, ಉಪಾಧ್ಯಕ್ಷ ವಿ.ಎಸ್ ಇಬ್ರಾಹಿಂ ಒಕ್ಕೆತ್ತೂರು, ಕೋಶಾಧಿಕಾರಿ ಅಂತೋನಿ ಲೋಬೋ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!