March 23, 2026

ಬಿಎಂಟಿಸಿ ಬಸ್ ಬೆಂಕಿಗಾಹುತಿ: ಪ್ರಯಾಣಿಕರು ಪಾರು

0
n3521072361642753006212b8f13b3385e5e1a71e49d351504aa367836a55f45fa50292cc84c386dd7b5ec1.jpg

ಬೆಂಗಳೂರು: ನಗರದ ಚಾಮರಾಜಪೇಟೆಯ ರಸ್ತೆಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಕೆಲ ಹೊತ್ತು ಆತಂಕಕಾರಿ ವಾತಾವಾರಣ ನಿರ್ಮಾಣವಾಗಿತ್ತು‌.

ಮೆಜೆಸ್ಟಿಕ್ ನಿಂದ ಚಾಮರಾಜಪೇಟೆಯ ಮಕ್ಕಳ ಕೂಟ ಬಳಿ ಬರುವಾಗ ಇದಕ್ಕಿಂದ್ದಂತೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.‌ ಕೂಡಲೇ ಬಿಎಂಟಿಸಿ ಚಾಲಕ ಬಸ್ ನಲ್ಲಿದ್ದ 40 ಮಂದಿ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ನೋಡು ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿದಿದೆ.

ಇನ್ನು ಬೆಂಕಿಗೆ ಬಸ್​ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಘಟನಾಸ್ಥಳಕ್ಕೆ ವಿವಿಪುರಂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ

Leave a Reply

Your email address will not be published. Required fields are marked *

error: Content is protected !!