March 23, 2026

ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರದಿಂದ ಅನುಮೋದನೆ

0
n35210133016427533132280362e1946eb2db505a2228d11dee13ffa83f092247f6f76397ccbef2a839063c.jpg

ಬೆಂಗಳೂರು: ರಾಜ್ಯ‌ ರಾಜಧಾನಿ ಬೆಂಗಳೂರು ಮತ್ತು ರಾಜ್ಯದ ಆರ್ಥಿಕ ಹೆಬ್ಬಾಗಿಲಾಗಿರುವ ಮಂಗಳೂರನ್ನು ಸಂಪರ್ಕಿಸುವ ಶಿರಾಡಿಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.

ಎನ್‍ಹೆಚ್‍ಎಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಸಿಎಂ ಬೊಮ್ಮಾಯಿ ಭರವಸೆ ಕೊಟ್ಟಿದ್ದಾರೆ. ಶಿರಾಡಿಘಾಟ್ ಚತುಷ್ಪಥ ಯೋಜನೆ 1200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ.

ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

Leave a Reply

Your email address will not be published. Required fields are marked *

error: Content is protected !!