March 23, 2026

ನಟಿ ವಿಜಯಲಕ್ಷ್ಮಿ ಗೆ ಲೈಂಗಿಕ ಕಿರುಕುಳ ಆರೋಪ: ವ್ಯಕ್ತಿಯ ಬಂಧನ

0
images-10.jpeg

ಬೆಂಗಳೂರು: ನಟಿ ವಿಜಯಲಕ್ಷ್ಮಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಪನನ್‌ಗಟ್ಟು ಪದೈ ಕಟ್ಚಿ ಪಕ್ಷದ ಸ್ಥಾಪಕ ಹರಿ ನಾಡಾರ್‌ ಎಂಬಾತನನ್ನು ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿ ಬುಧವಾರ ಬಂಧಿಸಿದ್ದಾರೆ.

ನಟಿಗೆ ಲೈಂಗಿಕ ಕಿರುಕುಳ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ಆತನನ್ನು ಬಂಧಿಸಲಾಗಿದೆ.

2020ರಲ್ಲಿ ನಟಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದಕ್ಕೆ ಲೈಂಗಿಕ ಕಿರುಕುಳವೇ ಕಾರಣ ಎನ್ನಲಾಗಿತ್ತು. 2020ರ ಜುಲೈನಲ್ಲಿ ನಾಮ್‌ ತಮಿಳರ್‌ ಕಟ್ಚಿ (ಎನ್‌ಟಿಕೆ) ಪಕ್ಷದ ನಾಯಕ ಸೀಮನ್‌ ಕುಮ್ಮಕ್ಕಿನ ಮೇಲೆ ನಾಡಾರ್‌ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದರು.

2020 ರಲ್ಲಿ ನಟಿ ವಿಜಯಲಕ್ಷ್ಮಿ ಆತ್ಮಹತ್ಯೆ ಯತ್ನ ಪ್ರಕರಣ ತನಿಖೆ ನಡೆಸುತ್ತಿದ್ದ ತಿರುವನ್‌ಮಿಯೂರ್‌ ಪೊಲೀಸರಿಗೆ ನಟಿ, ಈ ಹಿಂದೆ ತನ್ನೊಂದಿಗೆ ಸಂಬಂಧ ಹೊಂದಿದ್ದ ಎನ್‌ಟಿಕೆ ಮುಖಂಡ ಸೀಮನ್‌ ತನಗೆ ಕಿರುಕುಳ ನೀಡಲು ಹರಿ ನದರ್‌ನನ್ನು ಕಳಿಸಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದರು. ಇದೀಗ ಪ್ರಕರಣ ಸಂಬಂಧ ಬುಧವಾರ ಆತನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಕೋರ್ಟ್‌ ಮುಂದೆ ಆತನನ್ನು ಪೊಲೀಸರು ಹಾಜರುಪಡಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!