ರೋಹಿಂಗ್ಯಾ ಮುಸ್ಲಿಮರನ್ನು ಗಡಿಪಾರು ಮಾಡುವ ಯೋಚನೆ ಇಲ್ಲ: ಕರ್ನಾಟಕ ಸರ್ಕಾರ
ಬೆಂಗಳೂರು: ನಗರದಲ್ಲಿ 72 ರೋಹಿಂಗ್ಯಾ ಮುಸ್ಲಿಮರು ಇದ್ದಾರೆ. ಅವರನ್ನು ಗಡಿಪಾರು ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಕರ್ನಾಟಕ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.
ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾಗಳು ಸೇರಿದಂತೆ ಎಲ್ಲಾ ಅಕ್ರಮ ವಲಸಿಗರು ಮತ್ತು ಒಳನುಸುಳುವವರನ್ನು ತಕ್ಷಣವೇ ಗಡಿಪಾರು ಮಾಡುವಂತೆ ಕೋರಿ ಬಿಜೆಪಿ ನಾಯಕ ಮತ್ತು ನ್ಯಾಯವಾದಿ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ ರಿಟ್ ಅರ್ಜಿಗೆ ಪ್ರತಿಕ್ರಿಯೆಯಾಗಿ ರಾಜ್ಯ ಸರ್ಕಾರವು ಆಕ್ಷೇಪಣೆಗಳನ್ನು ಸಲ್ಲಿಸಿದೆ.
ರೋಹಿಂಗ್ಯಾ ಮುಸ್ಲಿಮರು ಬೆಂಗಳೂರಿನ ವಿವಿಧೆಡೆ ಹೊಟ್ಟೆಪಾಡಿಗೆ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳುವುದಿಲ್ಲ. ಗಡಿಪಾರು ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಗಡಿಪಾರು ಮಾಡಲು ಸಲ್ಲಿಸಿರುವ ಅರ್ಜಿಯನ್ನ ವಜಾಮಾಡಿ ಎಂದು ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ ಸರ್ಕಾರದಿಂದ ಹೇಳಿಕೆ ನೀಡಿದೆ. ಬಿಜೆಪಿಯ ಅಶ್ವಿನಿ ಉಪಾಧ್ಯಾಯ ಈ ಬಗ್ಗೆ ರೋಹಿಂಗ್ಯಾ ಮುಸ್ಲಿಮರನ್ನ ಗಡಿಪಾರು ಮಾಡುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.





