ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ಚೂರಿಯಿಂದ ಇರಿದು ಹಲ್ಲೆ
ಪಡುಬಿದ್ರಿ: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ’ಸೋಜಾ(35) ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತದ ಚಟ ಹೊಂದಿದ್ದ ನೆರೆಮನೆಯ ಸುಮಾರು 45 ವರ್ಷ ಪ್ರಾಯದ ವ್ಯಕ್ತಿಯು ಕ್ಷುಲ್ಲಕ ಕಾರಣಗಳಿಗಾಗಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.
ಹೆಜಮಾಡಿಯಲ್ಲಿರು ತನ್ನ ಮನೆ ಬಳಿ ಒರ್ವರೊಂದಿಗೆ ಮಾತನಾಡುತ್ತಿದ್ದಾಗ ಏಕಾಏಕಿ ಬಂದ ವ್ಯಕ್ತಿ ಹೊಟ್ಟೆಗೆ ಇರಿದಿದ್ದಾನೆ.




