February 2, 2026

ಮುಂಬೈ: 20 ಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ, ಇಬ್ಬರು ಮೃತ್ಯು

0
image_editor_output_image-1557289912-1642830015716.jpg

ಮುಂಬೈ: ಮುಂಬೈಯ ತಾಡ್‌ದೇವ್ ಪ್ರದೇಶದ ಭಾಟಿಯಾ ಆಸ್ಪತ್ರೆ ಸಮೀಪದ 20 ಮಹಡಿ ಕಟ್ಟಡದಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಆಂಬುಲೆನ್ಸ್‌ಗಳು ಸ್ಥಳಕ್ಕೆ ತಲುಪಿವೆ. ಅಗ್ನಿಶಾಮಕ ದಳದ 13 ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ನಿರತವಾಗಿವೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಹೇಳಿಕೆ ಉಲ್ಲೇಖಿಸಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!