February 2, 2026

ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಅಗ್ನಿ ದುರಂತ: ಇಬ್ಬರು ಮೃತ್ಯು

0
childrens-ward-of-kamla-nehru-hospital-in-bhopal-catches-fire.jpg

ವಿಜಯಪುರ: ವಿಜಯಪುರದಲ್ಲಿ ಭೀಕರ ಅಗ್ನಿ ದುರಂತವೊಂದು ಸಂಭವಿಸಿದ್ದು, ಪ್ಲಾಸ್ಟಿಕ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿಯಿಂದ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ನಿಡಗುಂದಿ ಸಮೀಪದ ಬಸವನಬಾಗೇವಾಡಿ ಕ್ರಾಸ್ ಬಳಿಯ ಪ್ಲಾಸ್ಟಿಕ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಅಂಗಡಿಯಲ್ಲಿ ಮಲಗಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ.

ಮೃತರನ್ನು ಅಶೋಕ್ ದೇಸ್ನೋಯಿ (25), ಲಿಂಬಾರಾಮ ದೇಸ್ನೋಯಿ (35) ಎಂದು ಗುರುತಿಸಲಾಗಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!