November 23, 2026

ಪುತ್ತೂರು: ಖಾಸಗಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ:
ಆರೋಪಿ ದೈಹಿಕ ನಿರ್ದೇಶಕನ ಬಂಧನ

0
Child-Abuse-1

ಪುತ್ತೂರು: ಇಲ್ಲಿನ ಖಾಸಗಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅದೇ ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಆರೋಪಿಯನ್ನು ಪೋಕ್ಸೊ ಕಾಯ್ದೆಯಡಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ.

ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದರು. ಆಕೆಯ ಪೋಷಕರು ಸಂಸ್ಥೆಗೆ ಬಂದು ಆಕೆಯನ್ನು ವಿಚಾರಿಸಿ ಬಳಿಕ ಸಂಜೆ ಘಟನೆಯ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ವಿದ್ಯಾರ್ಥಿನಿ ನೀಡಿದ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ನೇತೃತ್ವದಲ್ಲಿ ಪುತ್ತೂರು ಕ್ಲಬ್ ಬಳಿ ಬಂಧಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!