February 1, 2026

ಉಡುಪಿ ಬೀಚ್‌ನಲ್ಲಿ ರಾತ್ರಿ ಸಾರ್ವಜನಿಕರ ಸಂಚಾರ ನಿಷೇಧ

0
image_editor_output_image-2010795870-1643002504443.jpg

ಉಡುಪಿ: ಕೊರೊನಾ ನಿಯಂತ್ರಣ ಸಂಬಂಧ ಬೀಚ್‌ಗಳಲ್ಲಿ ರಾತ್ರಿ 7ರ ಅನಂತರ ಸಾರ್ವಜನಿಕರ ಪ್ರವೇಶ ನಿರ್ಬಂಧ ಹೇರಿರುವ ಜಿಲ್ಲಾಡಳಿತದ ಕ್ರಮಕ್ಕೆ ಸಾರ್ವಜನಿಕರು, ಪ್ರವಾಸಿಗರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರವಿವಾರ ಸಂಜೆಯ ಅನಂತರ ಮಲ್ಪೆ ಬೀಚ್‌ನಲ್ಲಿ ಸಾರ್ವಜನಿಕರು, ಪ್ರವಾಸಿಗರ ಸಂಖ್ಯೆ ತೀರ ಕಡಿಮೆ ಇತ್ತು. ವಾರಾಂತ್ಯ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮಲ್ಪೆ ಬೀಚ್‌ಗೆ ಬರುತ್ತಿದ್ದರು. ಕೋವಿಡ್‌ ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿ ಮಾಡಿರುವುದರಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಬೀಚ್‌ ಬದಿಯ ವ್ಯಾಪಾರಸ್ಥರಿಗೂ ನಿರೀಕ್ಷಿತ ಮಟ್ಟದಲ್ಲಿ ವ್ಯಾಪಾರ ವಹಿವಾಟು ಇರಲಿಲ್ಲ.

Leave a Reply

Your email address will not be published. Required fields are marked *

error: Content is protected !!