February 1, 2026

ದಿಢೀರನೆ ಉಸ್ತುವಾರಿ ಸಚಿವರನ್ನು ಬದಲಾಯಿಸಿದ ರಾಜ್ಯಸರ್ಕಾರ:
ದ.ಕ ಜಿಲ್ಲೆಗೆ ಸುನೀಲ್ ಕುಮಾರ್, ಉಡುಪಿ ಜಿಲ್ಲೆಗೆ ಎಸ್ ಅಂಗಾರ

0
allwyn_240122_min.jpg

ಮಂಗಳೂರು: ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಿ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವರಾಗಿ ಎಸ್. ಅಂಗಾರ ಅವರಿಗೆ ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ವಿ.ಸುನೀಲ್ ಕುಮಾರ್ ಆಗಿದ್ದು, ಹೊಸ ಆದೇಶದ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ವಿ.ಸುನೀಲ್ ಕುಮಾರ್ ಅವರನ್ನು ನೇಮಿಸಲಾಗಿದೆ.

ಅದೇ ರೀತಿ ಉಡುಪಿ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಎಸ್.ಅಂಗಾರ ಅವರನ್ನು ನೇಮಿಸಲಾಗಿದೆ. ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉತ್ತರ ಕನ್ನಡದ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!