May 10, 2026

ಲಾಸ್ ಏಂಜಲೀಸ್ ಮಾಲ್ ನಲ್ಲಿ ಗುಂಡಿನ ದಾಳಿ:
ಇಬ್ಬರು ಮೃತ್ಯು, ಪೊಲೀಸ್ ಅಧಿಕಾರಿಯೂ ಸೇರಿದಂತೆ ನಾಲ್ವರು ಗಾಯ

0
image_editor_output_image1419171846-1635224998672.jpg

ಲಾಸ್ ಏಂಜಲೀಸ್: ಅಮೆರಿಕದ ಐಡಹೋ ಪ್ರಾಂತ್ಯದ ಮಾಲೊಂದರಲ್ಲಿ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಮತಪಟ್ಟಿದ್ದಾರೆ. ಪೊಲೀಸ್ ಅಧಿಕಾರಿಯೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಮಾಲ್‌ನಲ್ಲಿ ಗುಂಡಿನ ದಾಳಿ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ದೂರವಾಣಿ ಮೂಲಕ ಮಾಹಿತಿ ಬಂದಿತ್ತು ಎಂದು ನಗರ ಪೊಲೀಸ್ ಮುಖ್ಯಸ್ಥ ರ್‍ಯಾನ್ ಲೀ ತಿಳಿಸಿದ್ದಾರೆ.

ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯಿಂದ ದೊಡ್ಡ ಪ್ರಮಾಣದ ಆತಂಕವೇನೂ ಇಲ್ಲ ಎಂದೂ ಅವರು ಹೇಳಿದ್ದಾರೆ.

‘ಕೃತ್ಯದ ಹಿಂದೆ ಯಾರ ಕೈವಾಡವಿದ್ದಿರಬಹುದು ಎಂಬ ಬಗ್ಗೆ ಹಾಗೂ ತನಿಖೆಯ ಮೇಲೆ ಪರಿಣಾಮ ಬೀರಬಹುದಾದಂಥ ವಿಚಾರಗಳ ಕುರಿತು ಈಗಲೇ ಏನೂ ಹೇಳಲಾಗದು’ ಎಂದೂ ಅವರು ಹೇಳಿದ್ದಾರೆ.

ಶೂಟೌಟ್ ನಡೆದ ಮಾಲ್‌ನಲ್ಲಿ 150ಕ್ಕೂ ಹೆಚ್ಚು ಮಳಿಗೆಗಳು ಮತ್ತು ರೆಸ್ಟೋರೆಂಟ್‌ಗಳಿವೆ ಎಂದು ‘ನ್ಯೂಯಾರ್ಕ್‌ ಟೈಮ್ಸ್’ ವರದಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!