ಬಿ.ಸಿ.ರೋಡ್-ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ 2023ರ ವೇಳೆಗೆ ಪೂರ್ಣ: ಸಂಸದ ನಳಿನ್ ಕುಮಾರ್ ಕಟೀಲು
ಬಂಟ್ವಾಳ: ಅಡ್ಡಹೊಳೆ ಮತ್ತು ಬಿ.ಸಿ.ರೋಡ್‌ನಿಂದ ರಾಷ್ಟ್ರೀಯ ಹೆದ್ದಾರಿ 75ರ ಅಭಿವೃದ್ಧಿಗೆ ನಿಯೋಜಿಸಲಾದ ಟೆಂಡರ್ ತ್ವರಿತಗತಿಯಲ್ಲಿ ಸಾಗುತ್ತಿದ್ದು, 2023ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸೋಮವಾರ 24ರಂದು ಬಿ.ಸಿ.ರೋಡ್ ಮತ್ತು ಕಲ್ಲಡ್ಕ ನಡುವಿನ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ 75ರ ಅಭಿವೃದ್ಧಿಗಾಗಿ ಬಿ.ಸಿ.ರೋಡ್-ಪುಂಜಾಲಕಟ್ಟೆ ನಡುವಿನ ಕಾಮಗಾರಿ ಚುರುಕಿನಿಂದ ಸಾಗುತ್ತಿದೆ, ಉಳಿದಂತೆ ಪಾಣೆಮಂಗಳೂರು ಮತ್ತು ಉಪ್ಪಿನಂಗಡಿಯಲ್ಲಿ ಸೇತುವೆಯನ್ನು ಮತ್ತು ಕಲ್ಲಡ್ಕದಲ್ಲಿ ಮೇಲ್ಸೇತುವೆಯನ್ನು ನಿರ್ಮಿಸಲಾಗುವುದು. ಕಾಮಗಾರಿಯ ಬಗ್ಗೆ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದಾರೆ.





