ಬೆಂಗಳೂರು: ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶಾಸಕ ಎಂ.ಬಿ. ಪಾಟೀಲ ಅವರನ್ನು ನೇಮಿಸಲಾಗಿದೆ.
ಎಂ.ಬಿ. ಪಾಟೀಲ ಅವರನ್ನು ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಪ್ರಸ್ತಾವವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಂಗೀಕರಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.