ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ
ಉತ್ತರ ಪ್ರದೇಶ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆ ಕ್ಷೇತ್ರದಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದೆ ಇರುವುದು ಒಳ್ಳೆಯದೆ. ಏಕೆಂದರೆ, ಯೋಗಿ ಆದಿತ್ಯನಾಥ್ ಅವರು ಇಲ್ಲಿ ಸಾಕಷ್ಟು ವಿರೋಧವನ್ನು ಎದುರಿಸಬೇಕಾಗುತ್ತಿತ್ತು ಎಂದು ಇಲ್ಲಿನ ರಾಮ ಮಂದಿರದ ಪ್ರಧಾನ ಅರ್ಚಕರು ಸೋಮವಾರ ಹೇಳಿದ್ದಾರೆ.
“ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹಿನ್ನೆಲೆಯಲ್ಲಿ ಮೂಲಸೌಕರ್ಯ ಯೋಜನೆಗಳಿಂದಾಗಿ ಇಲ್ಲಿನ ಮನೆಗಳು ಮತ್ತು ಅಂಗಡಿಗಳನ್ನು ನೆಲಸಮಗೊಳಿಸಲಾಗಿದೆ. ಇದರಿಂದ ಆದಿತ್ಯನಾಥ್ ಅವರು ಜನರ ವಿರೋಧವನ್ನು ಎದುರಿಸಬೇಕಾಗುತ್ತದೆ ಹೀಗಾಗಿ ಗೋರಖ್‌ಪುರದಿಂದ ಸ್ಪರ್ಧಿಸಬೇಕು ಎಂದು ನಾನು ಈ ಹಿಂದೆ ಸಲಹೆ ನೀಡಿದ್ದೆ” ಎಂದು ತಾತ್ಕಾಲಿಕ ರಾಮಲಲ್ಲಾ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಖಾಸಗಿ ಸುದ್ದಿಗೆ ತಿಳಿಸಿದ್ದಾರೆ.





