December 19, 2025

ವಿಟ್ಲ ಸಮೀಪದ ಅಡ್ಯನಡ್ಕ ನಿವಾಸಿ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ:ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದು ನೀರಿನ ವ್ಯವಸ್ಥೆ ಮಾಡಿದ ಕೃಷಿಕ

0
IMG_20220125_210829.jpg

ವಿಟ್ಲ: ಏಕಾಂಗಿಯಾಗಿ ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ ಪ್ರಯತ್ನಶೀಲ, ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ವಿಟ್ಲದ ಅಡ್ಯನಡ್ಕ ಸಮೀಪದ ಅಮೈ ನಿವಾಸಿ 73ರ ಹರೆಯದ ಮಹಾಲಿಂಗ ನಾಯ್ಕ ಅವರಿಗೆ ಪ್ರಶಸ್ತಿ ಲಭ್ಯವಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಕೃಷಿ ನಿಧಾನವಾಗಿ ಹಿನ್ನೆಲೆಗೆ ಸರಿಯುತ್ತಿರುವ ಸಂದರ್ಭದಲ್ಲಿ ಕೃಷಿಯೇ ಬದುಕಿಗೆ ಮೂಲಾಧಾರವೆಂಬ ಕಲ್ಪನೆಯನ್ನು ಬಿತ್ತುತ್ತಿರುವ ಸಾಧಕ ಅಮೈ ಮಾಹಾಲಿಂಗ ನಾಯ್ಕ. ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ ಎಂಬುದನ್ನು ಆಧುನಿಕ ತಲೆಮಾರಿಗೆ ತೋರಿಸಿಕೊಟ್ಟಿದ್ದಾರೆ.
ಕೃಷಿಗೆ ನೀರು ಹಾಯಿಸಲು ಪಂಪ್‌ ಸೆಟ್‌ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಭಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್‌ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಟ್ರಿಂಕ್ಲರ್‌ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿರುವ ಮಾಹಾಲಿಂಗ ನಾಯ್ಕ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದ ಒನ್‌ ಮ್ಯಾನ್‌ ಆರ್ಮಿಯಾಗಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!