ಮಂಗಳೂರು: ಕಳೆದ ಕೆಲವು ದಿನಗಳಿಂದ ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್(53) ಅವರು ಜನವರಿ 26 ಬುಧವಾರದಂದು ನಿಧನರಾಗಿದ್ದಾರೆ.
ಶೀಲಾ ಅವರ ಸಂಗೀತದ ಸಾಧನೆ ಮತ್ತು ಸೇವೆಯನ್ನು ಗುರುತಿಸಿ ಆರ್ಯಭಟ ಪ್ರಶಸ್ತಿ ನೀಡಲಾಗಿತ್ತು. ಅವರು ಕಳೆದ 30 ವರ್ಷಗಳಿಂದ ಸಂಗೀತ ಕಲಿಸುತ್ತಿದ್ದು, ವಿದ್ಯಾರ್ಥಿಗಳಿಗೂ ಸಂಗೀತ ಕಲಿಸುತ್ತಿದ್ದರು.