# Prathidina > Leading kannada news portal in Karnataka ## Posts - [ಕಾಸರಗೋಡ: ವಿವಾದಾತ್ಮಕ ರಸಪ್ರಶ್ನೆ ತಯಾರಿಸಿದ ಆರೋಪ: ಶಿಕ್ಷಕ ಸೇವೆಯಿಂದ ಅಮಾನತು](https://prathidina.com/?p=79613): ಕಾಸರಗೋಡು: ಕುಂಬಳೆ ಮತ್ತು ಮಂಜೇಶ್ವರ ಉಪಜಿಲ್ಲೆಗಳ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸ್ವಾತಂತ್ರ್ಯ ರಸಪ್ರಶ್ನೆ’ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಪ್ರಶ್ನೆಗಳನ್ನು ಸೇರಿಸಿದ ಆರೋಪದಲ್ಲಿ ಪಳ್ಳತ್ತಡ್ಕ ಎ.ಯು.ಪಿ. ಶಾಲೆಯ ಶಿಕ್ಷಕ ಗುರುಪ್ರಸಾದ್ ಅವರನ್ನು ಸಾರ್ವಜನಿಕ ಶಿಕ್ಷಣ ನಿರ್ದೇಶಕರು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಶಿಕ್ಷಕನ ವಿರುದ್ಧ ಕಟ್ಟುನಿಟ್ಟಿನ ಇಲಾಖಾ ಶಿಸ್ತು ಕ್ರಮ ಜರುಗಿಸುವಂತೆ ಶಾಲಾ ವ್ಯವಸ್ಥಾಪಕ ಮಂಡಳಿಗೆ ಸೂಚಿಸಲಾಗಿದೆ. ವಿವಾದ ಸೃಷ್ಟಿಸಿದ 5ನೇ ಪ್ರಶ್ನೆ ಉಪಜಿಲ್ಲಾ ಮಟ್ಟದ ಸಮಾಜ ವಿಜ್ಞಾನ ಕೂಟದ (ಸೋಷಿಯಲ್ ಸೈನ್ಸ್ ಕ್ಲಬ್) ವತಿಯಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಈ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ಕೇಳಲಾಗಿದ್ದ ಒಟ್ಟು 15 ಪ್ರಶ್ನೆಗಳ ಪೈಕಿ 5ನೇ ಪ್ರಶ್ನೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಯಿತು. “ಬ್ರಿಟಿಷರಿಂದ ಅತ್ಯಂತ ಕಠಿಣ ಶಿಕ್ಷೆಗೆ ಒಳಗಾದ ಸ್ವಾತಂತ್ರ್ಯ ಹೋರಾಟಗಾರ ಯಾರು?” ಎಂಬ ಪ್ರಶ್ನೆಗೆ, ವಿ.ಡಿ. ಸಾವರ್ಕರ್ ಅವರ ಹೆಸರನ್ನು ಅಧಿಕೃತ ಉತ್ತರವೆಂದು ಹೆಸರಿಸಲಾಗಿತ್ತು. ಈ ಪ್ರಶ್ನೆಯು ಇತಿಹಾಸವನ್ನು ತಿರುಚುವ ಪ್ರಯತ್ನ ಹಾಗೂ ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿ... - [ವಿಟ್ಲ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಪವಾಢ ಸದೃಶ ರೀತಿಯಲ್ಲಿ ಪಾರಾದ ಕುಟುಂಬ-ಮನೆ ಸಂಪೂರ್ಣ ಹಾನಿ](https://prathidina.com/?p=79610): ವಿಟ್ಲ: ವಿಟ್ಲ ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಎಂಬುವರ ಮನೆಯಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು… - [ಬಿಐಇ ಎಸ್, ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಭತ್ತದ ಗದ್ದೆ ಭೇಟಿ, ನೇಜಿ ನೆಡುವ ಕಾರ್ಯಕ್ರಮ](https://prathidina.com/?p=79608): ಇನ್ನೋಳಿ: ಮಂಗಳೂರಿನ ಇನ್ನೋಳಿಯ ಬಿಯರೀಸ್ ಇನ್‌ಸ್ಟಿಟ್ಯೂಟ್ ಆಫ್ ಎಮರ್ಜಿಂಗ್ ಸೈನ್ಸಸ್ (BIES) ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಜುಲೈ 30ರಂದು ಮಾರ್ಕಮೆ ಗ್ರಾಮದಲ್ಲಿ ಭತ್ತದ ಗದ್ದೆ ಭೇಟಿ ಹಾಗೂ ನೇಜಿ ನೆಡುವ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಕೃಷಿ ಪದ್ಧತಿಗಳ ಬಗ್ಗೆ ಪ್ರಾಯೋಗಿಕ ಅನುಭವ ನೀಡುವುದು, ಕೃಷಿಯ ಮಹತ್ವದ ಕುರಿತು ಅರಿವು ಮೂಡಿಸುವುದು ಹಾಗೂ ದೇಶದ ಆಹಾರ ಭದ್ರತೆಯಲ್ಲಿ ರೈತರ ಪಾತ್ರವನ್ನು ಪರಿಚಯಿಸುವುದಾಗಿತ್ತು. ಕಾರ್ಯಕ್ರಮದಲ್ಲಿ ಬಿಸಿಎ, ಬಿ.ಕಾಂ ಹಾಗೂ ಬಿಬಿಎ ವಿಭಾಗಗಳ 50ಕ್ಕೂ ಅಧಿಕ ಎನ್‌ಎಸ್‌ಎಸ್ ಸ್ವಯಂಸೇವಕರು ಉತ್ಸಾಹದಿಂದ ಭಾಗವಹಿಸಿದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಮಿಯಾಜ್ ಹಾಗೂ ಸಹಾಯಕ ಕಾರ್ಯಕ್ರಮಾಧಿಕಾರಿ ಸಹಾಧಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶಮೀಮಾ, ಜಕಿಯಾ, ಫರಾ, ಅರ್ಪಿತಾ, ಪ್ರಿಯಾ ಹಾಗೂ ಹೇಮಾವತಿ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಸಹಕಾರ ನೀಡಿದರು. ಸ್ಥಳೀಯ ರೈತರ ಮಾರ್ಗದರ್ಶನದಲ್ಲಿ ಸ್ವಯಂಸೇವಕರು ನೇಜಿ ನೆಡುವ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಈ... - [ಸಂಶುದ್ಧೀನ್ ಎಣ್ಮೂರವರಿಗೆ ಪ.ಗೋ ಪ್ರಶಸ್ತಿ](https://prathidina.com/?p=79606): ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮೀಣ ಯುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೀಡಲಾಗುತ್ತಿರುವ  *ಪ.ಗೋ*. (*ಪದ್ಯಾಣ ಗೋಪಾಲಕೃಷ್ಣ*)2026 ನೆ ಸಾಲಿನ  ಪ್ರಶಸ್ತಿ ಗೆ *ಸಂಶುದ್ಧೀನ್ ಎಣ್ಮೂರು* ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ,  ಉಡುಪಿ,ಉತ್ತರ ಕನ್ನಡ,ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಯ  ಕಾರ್ಯನಿರತ  ಪತ್ರಕರ್ತರಿಂದ  ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು.ಈ ಪೈಕಿ ಅತ್ಯುತ್ತಮ ಒಂದು ವರದಿಯನ್ನು ತೀರ್ಪುಗಾರರ ಸಮಿತಿ  ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ. ವಾರ್ತಾಭಾರತಿ ಕನ್ನಡ ದೈನಿಕದ ಉಪ ಸಂಪಾದಕ ಸಂಶುದ್ಧೀನ್ ಎಣ್ಮೂರು ಅವರು *ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ನ ಗ್ರಾಮೀಣ ಭಾಗದ ಅವಕಾಶ ವಂಚಿತ ಜನರ ಸಮಸ್ಯೆಗಳ  ಬಗ್ಗೆ ಬೆಳಕು ಚೆಲ್ಲುವ ವರದಿ ಆಯ್ಕೆಯಾಗಿದೆ*. ಫೆ.7, 2025 ರಂದು ವಾರ್ತಾ ಭಾರತಿಯಲ್ಲಿ ಪ್ರಕಟವಾದ  ‘ಆದಿವಾಸಿಗಳ ಬಾಳಿನಲ್ಲಿ ಬೆಳಕಾಗುದೇ ರಾಜ್ಯ ಸರಕಾರದ ನೀತಿ’  ವಿಶೇಷ ವರದಿ 2026 ನೆ ಸಾಲಿನ ಪ.ಗೋ ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ. - [ಕುಶಾಲನಗರ: ಶಾಲಾ ಕಾಂಪೌಂಡ್ ನಿಂದ ಗೇಟ್ ಕಳಚಿ ಬಿದ್ದು ಮಗು ಮೃತ್ಯು](https://prathidina.com/?p=79603): ಕುಶಾಲನಗರ: ಶಾಲಾ ಕಾಂಪೌಂಡ್ ನಿಂದ ಗೇಟ್ ಕಳಚಿ ಬಿದ್ದು ಮಗುವೊಂದು ಸಾವನ್ನಪ್ಪಿದ ಘಟನೆ ಕುಶಾಲನಗರ ಸಮೀಪದ ಬಸವನಹಳ್ಳಿ ಹಾಡಿಯಲ್ಲಿ ನಡೆದಿದೆ. ಬಸವನಹಳ್ಳಿ ಹಾಡಿಯ ಸತೀಶ ಮತ್ತು ಪವಿತ್ರ ದಂಪತಿಯ ಪುತ್ರಿ ಅಪೂರ್ವ (4) ಮೃತ ಮಗು. ಶುಕ್ರವಾರ ಸಂಜೆ ವೇಳೆ ಗೇಟ್ ಬಳಿ ಬಂದಾಗ ಶಿಥಿಲವಾಗಿದ್ದ ಕಾಂಪೌಂಡ್ ನಿಂದ ಬೃಹತ್ ಕಬ್ಬಿಣದ ಗೇಟ್ ಗೋಡೆ ಸಹಿತ ಕಳಚಿ ಬಿದ್ದು ಮಗುವಿನ ತಲೆ ಮೇಲೆ ಬಿದ್ದು ತೀವ್ರ ಗಾಯಗೊಂಡ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ. - [ವಿಟ್ಲ: ಟೋಪ್ಕೋ ಜುವೆಲ್ಲರಿಯಲ್ಲಿ ಫ್ರೀಡಂ ಆಫರ್ ಸೇಲ್: ಕೇವಲ ಎರಡು ದಿನ ಮಾತ್ರ  ಆಗಸ್ಟ್ 14 ಮತ್ತು 15 ರಂದು](https://prathidina.com/?p=79602): ವಿಟ್ಲ: ಟೋಪ್ಕೋ ಜುವೆಲ್ಲರಿಯಲ್ಲಿ ಫ್ರೀಡಂ ಆಫರ್ ಸೇಲ್: ಕೇವಲ ಎರಡು ದಿನ ಮಾತ್ರ  ಆಗಸ್ಟ್ 14 ಮತ್ತು 15 ರಂದು - [ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಮೃತ್ಯು](https://prathidina.com/?p=79600): ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ನಡೆದಿದೆ. ಮೃತರನ್ನ ಗುರುಕಿರಣ್ (28), ಮೋಹನ್ (30), ಜ್ಞಾನೇಶ್ (28) ಹಾಗೂ ಗಂಭೀರ ಗಾಯಗೊಂಡಿರುವ ಪ್ರೇಮ್ ಕುಮಾರ್ ಹಾಗೂ ಹೃತಿಕ್ ಎಂದು ಗುರುತಿಸಲಾಗಿದೆ. ಮೃತರು ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ನಿವಾಸಿಗಳಾಗಿದ್ದು, ಐವರು ಒಂದೇ ಗ್ರಾಮದ ಸ್ನೇಹಿತರು ಎಂದು ತಿಳಿದು ಬಂದಿದೆ. ಮೃತರು ಮತ್ತು ಗಾಯಾಳುಗಳು ತುಮಕೂರಿನಿಂದ ಧರ್ಮಸ್ಥಳಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂಬದಿಯಿಂದ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪಿದ್ದಾರೆ. ಅಪಘಾತದ ಶಬ್ದ ಕೇಳಿ ಸ್ಥಳೀಯರು ಕೂಡಲೇ ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ. ಬಳಿಕ ಹೆಚ್ಚಿನ... - [ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ: ಹಣಕಾಸಿನ ವಿಚಾರದಲ್ಲಿ ವೈಮನಸ್ಸು: ಹತ್ಯೆಗೆ ಸುಪಾರಿ](https://prathidina.com/?p=79598): ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಹಣಕಾಸಿನ ವಿಚಾರದಲ್ಲಿ ವೈಮನಸ್ಸು: ಹತ್ಯೆಗೆ ಸುಪಾರಿ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌ ಡಿಸೋಜಾ (55) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಆಗಸ್ಟ್‌ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಕಾಪು ತಾಲ್ಲೂಕಿನ ಮುದರಂಗಡಿಯ ಸೆಂಟ್‌ ಕ್ಷೇವಿಯರ್‌ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿರುವ ಪ್ರಿನ್ಸ್‌ ಎಂಟರ್‌ಪ್ರೈಸಸ್‌ ಕಚೇರಿಗೆ ಬಂದಿದ್ದ ಡೇವಿಡ್‌ ಡಿಸೋಜಾ, ಬಳಿಕ ತಮ್ಮ ಥಾರ್‌ ವಾಹನದ ಚಾಲಕನ ಬದಿಯ ಬಾಗಿಲ ಬಳಿ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ತಲೆಗೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದರು.ಈ ಸಂಬಂಧ ಶಿರ್ವ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬಸ್‌ನಲ್ಲಿ ಭಟ್ಕಳದ ಕಡೆಗೆ ತೆರಳುತ್ತಿರುವ... - [ಪ್ರಗತಿಪರ ಕೃಷಿಕ ಇಬ್ರಾಹಿಂ ಹಾಜಿ THMA ಕುದ್ದುಪದವು ಇನ್ನಿಲ್ಲ](https://prathidina.com/?p=79596): ವಿಟ್ಲ ಸಮೀಪದ ಕುದ್ದುಪದವು ಕಬ್ಬಿನಹಿತ್ಲು ನಿವಾಸಿ ಪ್ರಗತಿಪರ ಕೃಷಿಕರಾದ ಇಬ್ರಾಹಿಂ ಹಾಜಿ THMA (78) ಅವರು ಅಲ್ಪಕಾಲದ ಅಸೌಖ್ಯದಿಂದ 08-08-2026 ಶನಿವಾರ ಬೆಳಗ್ಗಿನ ಜಾವ 05:00 ಗಂಟೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಸಿದ್ಧ ಉದ್ಯಮಿ, ಧಾರ್ಮಿಕ ನೇತಾರರಾಗಿದ್ದ ಮರ್ಹೂಮ್ ಅಬ್ಬಾಸ್ ಹಾಜಿ THMA ಉಕ್ಕುಡ ಅವರ ಪುತ್ರರಾಗಿರುವ ಇಬ್ರಾಹಿಂ ಹಾಜಿ ತನ್ನ ಎಳೆಯ ಪ್ರಾಯದಲ್ಲಿ ಕೋರೆ ಉದ್ಯಮ ಹಾಗೂ ದಿನಸಿ ಅಂಗಡಿಯಲ್ಲಿ ತಂದೆಯ ಜೊತೆಗೆ ತೊಡಗಿಸಿಕೊಂಡಿದ್ದರು. ಕಠಿಣ ಶ್ರಮ ಜೀವಿಯಾಗಿದ್ದ ಮೃತರು ನಂತರದ ದಿನಗಳಲ್ಲಿ ಸ್ವಂತ ಕೃಷಿಕರಾಗಿ ದುಡಿದು “ಉತ್ತಮ ಕೃಷಿಕ ಪ್ರಶಸ್ತಿ”ಗೆ ಭಾಜನರಾಗಿದ್ದರು. ಕನ್ನಡ ಸಾಹಿತ್ಯದಲ್ಲಿ ಬಹಳಷ್ಟು ಆಸಕ್ತಿ ಹೊಂದಿದ್ದ ಸೌಮ್ಯ ಸ್ವಭಾವದ ಇಬ್ರಾಹಿಂ ಹಾಜಿ ಸಾಹಿತ್ಯ ಲೋಕದಲ್ಲಿ ಅಪಾರವಾದ ಜ್ಞಾನ ಭಂಡಾರವನ್ನು ಹೊಂದಿದ್ದರು. ಮೃತರು ಪತ್ನಿ ನೆಬಿಸಾ ಹಜ್ಜುಮ್ಮ, ಮೂವರು ಪುತ್ರರಾದ ಗಲ್ಫ್ ಉದ್ಯೋಗಿ ಬಶೀರ್, ಉದ್ಯಮಿ ಮಂಗಳಪದವು ಐಡಿಯಲ್ ಫ್ಯುಯೆಲ್ಸ್ ಪೆಟ್ರೋಲ್ ಪಂಪಿನ ಹನೀಫ್ ಕುದ್ದುಪದವು, ಬೆಂಗಳೂರು ಎಮಿರೇಟ್ಸ್ ಗ್ರೂಪ್ ಹೋಟೆಲ್ ಉದ್ಯಮಿ ಮಹಮ್ಮದ್ ಶರೀಫ್, ಇಬ್ಬರು... - [ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ](https://prathidina.com/?p=79594) - [ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿ ಸೋಜಾ ಹತ್ಯೆ ಆರೋಪಿ ಕಾಲಿಗೆ  ಪೊಲೀಸರಿಂದ ಫೈರಿಂಗ್](https://prathidina.com/?p=79592): ಉಡುಪಿ: ಕಾಂಗ್ರೆಸ್‌ ಮುಖಂಡ ಡೇವಿಡ್‌ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿ ವಶಕ್ಕೆ ಪಡೆದಿದ್ದಾರೆ.ಆರೋಪಿ ಯುಪಿ ಮೂಲದ ಶೂಟರ್‌ ರಾಜು ಬಲಗಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ಘಟನೆ ನಡೆದಿದೆ. ಮೂವರು ಆರೋಪಿಗಳು ಬೈಂದೂರಿನ ಒತ್ತಿನಣೆಯಲ್ಲಿ ಅಡಗಿರುವ ಕುರಿತು ಎಸ್‌ಐ ತೇಜಸ್ವಿ ಹಾಗೂ ಪ್ರಸನ್ನ ಅವರ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿತ್ತು. ಈ ವೇಳೆ ಪೊಲೀಸರ ಮೇಲೆ ಆರೋಪಿಗಳು ದಾಳಿ ನಡೆಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಪೊಲೀಸರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. - [ದ.ಕ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಆ.8ರಂದು ಶಾಲಾ-ಕಾಲೇಜ್ ಗಳಿಗೆ ರಜೆ](https://prathidina.com/?p=79590): ಪುತ್ತೂರು : ಭಾರಿ ಮಳೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಆ.8ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿ ಪ್ರಕಾರವಾಗಿ, ಪುತ್ತೂರು ತಾಲೂಕು, ಬೆಳ್ತಂಗಡಿ ತಾಲೂಕು, ಸುಳ್ಯ ತಾಲೂಕು, ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಮತ್ತು ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ & ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜು, ಎಲ್ಲಾ ITI ಮತ್ತು Diploma ಕಾಲೇಜುಗಳು 12ನೇ ತರಗತಿ ವರೆಗೆ ರಜೆ ಘೋಷಿಸಲಾಗಿದೆ. - [ಪಡುಬಿದ್ರಿ: ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ](https://prathidina.com/?p=79589): ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ದುಷ್ಕಮಿಗಳ ಗುಂಡಿಗೆ ಬಲಿಯಾಗಿರುವ ಬಗ್ಗೆ ವರದಿಯಾಗಿದೆ. ಇಂದು ಮಧ್ಯಾಹ್ನ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್‌ ಅವರಿಗೆ ಗುಂಡಿಕ್ಕಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. - [ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ: ಯೆಲ್ಲೊ ಅಲರ್ಟ್ ಘೋಷಣೆ](https://prathidina.com/?p=79587): ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು, ಇಂದು (ಆಗಸ್ಟ್ 7) ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವೆಡೆ ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು, ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಧಾರವಾಡ, ಹಾವೇರಿ... - [ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದು ಕೂಲಿ ಕಾರ್ಮಿಕ ಮೃತ್ಯು](https://prathidina.com/?p=79586): ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅಡ್ಯನಡ್ಕ ಸಮೀಪದ ಮನಿಮುಂಡ ಎಂಬಲ್ಲಿ ನಡೆದಿದೆ. ಮೃತರನ್ನು ದಿನೇಶ್ ನಾಯ್ಕ್ (32) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ದಿನೇಶ್ ರವರು ಪತ್ನಿ ಹಾಗೂ ತಂದೆ ತಾಯಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. - [ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ](https://prathidina.com/?p=79584) - [ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ](https://prathidina.com/?p=79582): ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಕಲ್ಮಾಡಿ ನಿವಾಸಿ ರತ್ನಾ ಅವರ ಪುತ್ರಿ ಕೃತಿ ಬಂಗೇರಾ (27) ಎಂದು ಗುರುತಿಸಲಾಗಿದೆ. ಕೃತಿ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ನಗರದ ಕಡಿಯಾಳಿ ಸಮೀಪದ ಖಾಸಗಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಸುಮಾರು ಐದು ತಿಂಗಳಿಂದ ಅವರು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಮಾನಸಿಕ ಒತ್ತಡದಿಂದ ಬಳಲುತ್ತಿದ್ದು, ಕಲ್ಮಾಡಿಯಲ್ಲಿರುವ ತಮ್ಮ ನಿವಾಸದ ಬೆಡ್‌ರೂಮ್‌ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. - [ವೃದ್ಧಾಶ್ರಮದಲ್ಲಿ ತಂದೆ ಮೃತ್ಯು : ವೀಡಿಯೊ ಕಾಲ್ ಮೂಲಕ ಅಂತ್ಯಕ್ರಿಯೆ ವೀಕ್ಷಿಸಿದ ಪುತ್ರಿಯರು](https://prathidina.com/?p=79579): ಹರ್ಯಾಣ: ತನ್ನ ಮೂವರು ಪುತ್ರಿಯರನ್ನು ಓದಿಸಲು ಜೀವನವನ್ನೇ ಸವೆಸಿದ ವೃದ್ಧರೊಬ್ಬರು ಹರಿಯಾಣದ ಸೋನಿಪತ್‌ನಲ್ಲಿರುವ ವೃದ್ಧಾಶ್ರಮದಲ್ಲಿ ನಿಧನರಾದರು. ಆದರೆ, ಅಂತಿಮ ವಿಧಿ ವಿಧಾನಗಳಲ್ಲಿ ಅವರ ಪುತ್ರಿಯರು ಪ್ರತ್ಯಕ್ಷವಾಗಿ ಪಾಲ್ಗೊಳ್ಳಲಿಲ್ಲ. ಬದಲಿಗೆ ಅವರು ನೇಪಾಳ, ಉತ್ತರಪ್ರದೇಶ ಮತ್ತು ಮುಂಬೈನಿಂದ ವೀಡಿಯೊ ಕಾಲ್ ಮೂಲಕ ತಮ್ಮ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು. ಮೂಲತಃ ಮುಂಬೈಯವರಾದ ಮತ್ತು ಮಾಜಿ ಜವಳಿ ವ್ಯಾಪಾರಿಯಾಗಿದ್ದ ಶಿವಚರಣ್ ರಾಮ್ ರತನ್ ಗುಪ್ತಾ ಅವರು ಸುಮಾರು ಎರಡು ವರ್ಷಗಳಿಂದ ವೃದ್ಧಾಶ್ರಮದಲ್ಲಿ ವಾಸಿಸುತ್ತಿದ್ದರು. ಅವರು ತಮ್ಮ ಪತ್ನಿ ಮೀನಾ ಅವರೊಂದಿಗೆ ಅಲ್ಲಿಗೆ ಬಂದಿದ್ದರು. ಆದರೆ, ಮೀನಾ ಅವರು ಈ ಹಿಂದೆ ನಿಧನರಾಗಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಗುಪ್ತಾ ಅವರು ಮಂಗಳವಾರ ಬೆಳಗ್ಗೆ 3.30ಕ್ಕೆ ನಿಧನರಾದರು. ಅವರ ನಿಧನದ ನಂತರ ವೃದ್ಧಾಶ್ರಮದ ಆಡಳಿತ ಮಂಡಳಿ ಅವರ ಮೂವರು ಪುತ್ರಿಯರನ್ನು ಸಂಪರ್ಕಿಸಿತು. ಪುತ್ರಿಯರಿಗೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸೋನಿಪತ್‌ಗೆ ತಲುಪಲು ಸಾಧ್ಯವಾಗಲಿಲ್ಲ. ಬದಲಿಗೆ ಅವರು ವೀಡಿಯೊ ಕಾಲ್ ಮೂಲಕ ಅಂತಿಮ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು. ವೃದ್ಧಾಶ್ರಮದ ಆಡಳಿತ ಮಂಡಳಿ ಹಾಗೂ ಸ್ಥಳೀಯ... - [ಕೊಚ್ಚಿ: ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕ: ತಪ್ಪಿದ ಬಾರಿ ದುರಂತ; ಅರೋಪಿ ಬಂಧನ](https://prathidina.com/?p=79576): ಕೊಚ್ಚಿ: ಮಲೇಷ್ಯಾದ ಕೌಲಾಲಂಪುರ್‌ನಿಂದ ಕೇರಳದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಬಾಟಿಕ್ ಏರ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ಎಮರ್ಜೆನ್ಸಿ ಡೋರ್‌ ತೆರೆಯಲು ಯತ್ನಿಸಿದ ಹಾಗೂ ಅದರ ಗ್ಲಾಸ್ ಪ್ಯಾನಲ್ ಅನ್ನು ಒಡೆದುಹಾಕಿದ್ದಾನೆ. ಗಗನಸಖಿಯರು ಹಾಗೂ ಸಹ ಪ್ರಯಾಣಿಕರ ಸಮಯಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದೆ. ಬುಧವಾರ ರಾತ್ರಿ ‘ಬಾಟಿಕ್ ಏರ್ OD231’ (ಬೋಯಿಂಗ್ 737) ವಿಮಾನದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪಾಲಕ್ಕಾಡ್ ಮೂಲದ, ಪ್ರಸ್ತುತ ಶ್ರೀಮೂಲನಗರಂನಲ್ಲಿ ವಾಸಿಸುತ್ತಿರುವ 36 ವರ್ಷದ ಜಂಶೀರ್ ಅಥಣಿಕ್ಕಲ್ ಎಂದು ಗುರುತಿಸಲಾಗಿದೆ. ವಿಮಾನವು ಕೊಚ್ಚಿಯತ್ತ ಹಾರಾಟ ನಡೆಸುತ್ತಿದ್ದಾಗ (ರಾತ್ರಿ ಸುಮಾರು 9.30 ರಿಂದ 11.05 ರ ನಡುವೆ) 12A ಸೀಟಿನಲ್ಲಿ ಕುಳಿತಿದ್ದ ಜಂಶೀರ್ ಇದ್ದಕ್ಕಿದ್ದಂತೆ ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದ್ದಾನೆ. ವಿಮಾನ ಆಗಸದಲ್ಲಿದ್ದಾಗಲೇ ಆತ ಕಾಲಿನಿಂದ ಒದ್ದು ಎಮರ್ಜೆನ್ಸಿ ನಿರ್ಗಮನ ಬಾಗಿಲಿನ ಗ್ಲಾಸ್ ಪ್ಯಾನಲ್ ಅನ್ನು ಪುಡಿಪುಡಿ ಮಾಡಿದ್ದಾನೆ. ಬಳಿಕ ಎಮರ್ಜೆನ್ಸಿ ಬಾಗಿಲನ್ನು ಬಲವಂತವಾಗಿ ತೆರೆಯಲು ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಕ್ಯಾಬಿನ್ ಸಿಬ್ಬಂದಿ ಹಾಗೂ ಸಹ ಪ್ರಯಾಣಿಕರು ತಕ್ಷಣವೇ ಆತನನ್ನು ತಡೆಯಲು ಯತ್ನಿಸಿದ್ದಾರೆ. ರಾತ್ರಿ... - [ಬಿ.ಸಿ ರೋಡ್: ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ವಾಹನ ಅಪಘಾತ ಪ್ರಕರಣ: ಗಾಯಾಳು ಇಬ್ಬರು ಮೃತ್ಯು-](https://prathidina.com/?p=79575): ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಗುರುವಾರ ಸಂಜೆ ಸುಮಾರು 6.30 ಗಂಟೆಗೆ ಕಲ್ಲಡ್ಕ ಕಡೆಯಿಂದ ಲೊರೆಟ್ಟೊ ಕಡೆಗೆ ತೆರಳುತ್ತಿದ್ದ KA-19-AF-8073 ನೋಂದಣಿಯ ಟಿಪ್ಪರ್ ಲಾರಿಯನ್ನು ಪಲ್ಲಮಜಲು ನಿವಾಸಿ ಸಲ್ಮಾನ್ ಫಾರುಕ್ (33) ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು, ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ KA-70-H-5059 ನೋಂದಣಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರ ಪಾಣೆಮಂಗಳೂರು ಸಮೀಪದ ಬೋರುಗುಡ್ಡೆ ದಯಾನಂದ ಹಾಗೂ ಹಿಂಬದಿಯಲ್ಲಿ ಪ್ರಯಾಣಿಸುತ್ತಿದ್ದ ನಾಯಿಲ ನಿವಾಸಿ ಯಶ್ವಂತ್ ಕುಲಾಲ್ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರ ನೆರವಿನಿಂದ ಇಬ್ಬರನ್ನೂ ತಕ್ಷಣ ಮಂಗಳೂರು ಜಿಲ್ಲಾ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಹಸವಾರ ಯಶ್ವಂತ್ ಕುಲಾಲ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಬಳಿಕ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ದಯಾನಂದ ಕೂಡ ಚಿಕಿತ್ಸೆ... - [ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್‌ಐಎ](https://prathidina.com/?p=79574): ಸುಳ್ಯ : 2022ರಲ್ಲಿ ನಡೆದ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. - [ಬಿ.ಸಿ ರೋಡ್ ನಲ್ಲಿ ನಡೆದ ಭೀಕರ ಅಪಘಾತ ಪ್ರಕರಣ: ಗಂಭೀರ ಗಾಯಗೊಂಡಿದ್ದ ಓರ್ವ ಮೃತ್ಯು](https://prathidina.com/?p=79572): ಬಿ.ಸಿ. ರೋಡ್: ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಸರ್ಕಲ್ ಬಳಿ ಟಿಪ್ಪರ್ ಲಾರಿ ಹಾಗೂ ಆಕ್ಟಿವಾ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ಸಾಗಿಸುತ್ತಿದ್ದ ಸಂದರ್ಭ ಚಿಂತಾಜನಕ ಸ್ಥಿತಿಯಲ್ಲಿದ್ದ ಗಾಯಾಳು ಯಶವಂತ್ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ. ಪಾಣೆಮಂಗಳೂರು ಹೊರವಲಯದ ಮರ್ದೋಳಿ ನಿವಾಸಿಗಳಾದ ಯಶವಂತ್ ಮತ್ತು ದಯಾನಂದ ಆಕ್ಟೀವಾದಲ್ಲಿ ಪ್ರಯಾಣಿಸುತ್ತಿದ್ದು ಅಪಘಾತದಲ್ಲಿ ಗಂಭೀರ ಗಾಯಗೊಂಡ ಯಶವಂತ್ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ದಯಾನಂದ ಕೂಡಾ ಗಂಭೀರ ಗಾಯಗೊಂಡು ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. - [ಬಂಟ್ವಾಳ: ಬಿ.ಸಿ ರೋಡ್ ಅಪಾಯಕಾರಿ ಸರ್ಕಲ್ ಬಳಿ ಟಿಪ್ಪರ್ ಲಾರಿ ಮತ್ತು ದ್ವಿಚಕ್ರ ನಡುವೆ ಅಪಘಾತ: ಸವಾರರಿಬ್ಬರು ಗಂಭೀರ](https://prathidina.com/?p=79570): ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಸರ್ಕಲ್ ಬಳಿ ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಪಾಣೆಮಂಗಳೂರು ಬಳಿಯ ಮರ್ದೋಳಿ ನಿವಾಸಿಗಳಾದ ಯಶವಂತ್ ಮತ್ತು ದಯಾನಂದ ಗಂಭೀರ ಗಾಯಗೊಂಡ ಸವಾರರಾಗಿದ್ದು ಇಬ್ಬರನ್ನು ಸಾರ್ವಜನಿಕರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿ.ಸಿ. ರೋಡ್ ಜಂಕ್ಷನ್ ಬಳಿ ಟಿಪ್ಪರ್ ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಈ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಆಕ್ಟಿವಾ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದು, ತೀವ್ರ ಸ್ವರೂಪದ ಗಾಯಗಳಾಗಿವೆ.ಅಪಘಾತದ ತೀವ್ರತೆಗೆ ಇಬ್ಬರೂ ರಕ್ತಸಿಕ್ತವಾಗಿ ರಸ್ತೆಯಲ್ಲಿ ಬಿದ್ದಿದ್ದು, ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ. ತಕ್ಷಣವೇ ಸ್ಥಳೀಯರು ಸ್ಪಂದಿಸಿ, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಜನ ಜಮಾಯಿಸಿ ಕೆಲ ಹೊತ್ತುಗಳ ಕಾಲ ವಾಹನ ದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ಥ ಉಂಟಾಯಿತು. ಟಿಪ್ಪರ್ ಲಾರಿಯನ್ನು ಸಂಚಾರ ಪೊಲೀಸ್ ಠಾಣೆಯ ಪೊಲೀಸರು... - [ಮಾಣಿ: ಚಾಲಕನ ನಿಯಂತ್ರಣ ಕಳೆದು ಪಲ್ಟಿಯಾದ ಕಾರು: ಒಂದೇ ಕುಟುಂಬದ ಆರು ಮಂದಿಗೆ ಸಣ್ಣಪುಟ್ಟ ಗಾಯ](https://prathidina.com/?p=79568): ವಿಟ್ಲ: ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ಗುರುವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಇಬ್ಬರು ದೊಡ್ಡವರು ಹಾಗೂ ನಾಲ್ವರು ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಸುರಿಕುಮೇರು ಸಮೀಪದ ಹೆದ್ದಾರಿಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಹಾಗೂ ರಸ್ತೆಯ ಅಸಮರ್ಪಕ ವ್ಯವಸ್ಥೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲ ಆರು ಮಂದಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರ ಪ್ರಕಾರ, ಸುರಿಕುಮೇರು ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿರುವ ಕಾರಣ ಈ ಹಿಂದೆ ಕೂಡ ಅನೇಕ ಅಪಘಾತಗಳು ಸಂಭವಿಸಿವೆ. ಸಮರ್ಪಕ ಸೂಚನಾ ಫಲಕಗಳು, ಸುರಕ್ಷತಾ ಕ್ರಮಗಳು ಹಾಗೂ ವೈಜ್ಞಾನಿಕ ರೀತಿಯ ರಸ್ತೆ ಕಾಮಗಾರಿ ಇಲ್ಲದಿರುವುದು ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ ಎಂದು... - [ಚಿಕ್ಕಮಗಳೂರು: ಮುಳ್ಳಯ್ಯನಗಿರಿ-ದತ್ತಪೀಠಕ್ಕೆ ತೆರಳುವ ಪ್ರವಾಸಿಗರಿಗೆ ಎಚ್ಚರಿಕೆ: ಬೈಕ್ ಸವಾರನ ಮೇಲೆ ಮರ ಬಿದ್ದು ಕೂದಲೆಳೆ ಅಂತರದಲ್ಲಿ ಪಾರು](https://prathidina.com/?p=79566): ಚಿಕ್ಕಮಗಳೂರು: ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಅವಾಂತರಗಳು ಮುಂದುವರಿದಿದ್ದು, ಮುಳ್ಳಯ್ಯನಗಿರಿ-ದತ್ತಪೀಠಕ್ಕೆ ತೆರಳುವ ಪ್ರವಾಸಿಗರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಚಿಕ್ಕಮಗಳೂರು ತಾಲೂಕಿನ ಚನ್ನಗೋಡನಹಳ್ಳಿ ಸಮೀಪ ಮುಳ್ಳಯ್ಯನಗಿರಿ ಮಾರ್ಗದಲ್ಲಿ ಭಾರೀ ಗಾಳಿಗೆ ಮರ ಬುಡಸಮೇತ ಉರುಳಿ ಪ್ರವಾಸಿ ಬೈಕ್ ಮೇಲೆ ಬಿದ್ದಿದೆ. ಮರದ ತುದಿ ಭಾಗ ಮಾತ್ರ ಬೈಕ್‌ಗೆ ತಗುಲಿದ್ದರಿಂದ ಸವಾರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಮಿಯ ತೇವಾಂಶ ಇನ್ನೂ ಹೆಚ್ಚಿರುವುದರಿಂದ ಹಲವೆಡೆ ಮಣ್ಣು ಕುಸಿಯುವ ಘಟನೆಗಳು ವರದಿಯಾಗುತ್ತಿವೆ. ಮುಳ್ಳಯ್ಯನಗಿರಿ-ದತ್ತಪೀಠ ಮಾರ್ಗದಲ್ಲೂ ಅಲ್ಲಲ್ಲಿ ಭೂ ಕುಸಿತ ಸಂಭವಿಸಿದ್ದು, ರಸ್ತೆ ಸಂಚಾರದಲ್ಲಿ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ ಹಾಗೂ ದತ್ತಪೀಠಕ್ಕೆ ತೆರಳುವ ಪ್ರವಾಸಿಗರು ಮತ್ತು ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. - [ಸುರತ್ಕಲ್: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು SSLC ವಿದ್ಯಾರ್ಥಿ ಮೃತ್ಯು](https://prathidina.com/?p=79564): ಸುರತ್ಕಲ್: ಆಟದ ಮೈದಾನದಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಟದ ಮಧ್ಯೆಯೇ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಬುಧವಾರ (ಆಗಸ್ಟ್ 5) ನಡೆದಿದೆ. ಸೂರಿಂಜೆ ನಿವಾಸಿ ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಮೃತಪಟ್ಟ ದುರ್ದೈವಿ. ಈತ ಸೂರಿಂಜೆ ಕೋಟೆ ಬೋಳ್ಳಾರು ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಬುಧವಾರ ಸಂಜೆ ಲಿಖಿತ್ ತನ್ನ ಗೆಳೆಯರೊಂದಿಗೆ ಸೂರಿಂಜೆ ಮೈದಾನದಲ್ಲಿ ವಾಲಿಬಾಲ್ ಆಡುತ್ತಿದ್ದನು. ಆಟದ ನಡುವೆಯೇ ಆತ ಹಠಾತ್ತಾಗಿ ಕುಸಿದು ಬಿದ್ದಿದ್ದಾನೆ. ಗಾಬರಿಗೊಂಡ ಸ್ನೇಹಿತರು ಮತ್ತು ಸ್ಥಳೀಯರು ತಕ್ಷಣವೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಲಿಖಿತ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಶಾಲೆಯಲ್ಲಿ ಎಲ್ಲರೊಂದಿಗೆ ಬೆರೆಯುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿಯ ಅಕಾಲಿಕ ನಿಧನವು ಸೂರಿಂಜೆ ಗ್ರಾಮ ಮತ್ತು ಶಾಲೆಯಲ್ಲಿ ಶೋಕದ ಛಾಯೆ ಆವರಿಸುವಂತೆ ಮಾಡಿದೆ. ಹದಿಹರೆಯದ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. - [ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ](https://prathidina.com/?p=79562) - [ಸುಳ್ಯ: ವಿವಾಹಿತ ಮಹಿಳೆಯ ಕೊಲ್ಲುವುದಾಗಿ ಬೆದರಿಕೆ: ಆಟೋ ಚಾಲಕನ ಬಂಧನ](https://prathidina.com/?p=79560): ಸುಳ್ಯದ ಸೂರ್ತಿಲದಲ್ಲಿ ವಿವಾಹಿತ ಮಹಿಳೆಯೋರ್ವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಪೀಡಿಸಿದ ಆರೋಪದಲ್ಲಿ ಆಟೋ ಚಾಲಕ ಗೋಪಾಲಕೃಷ್ಣ ಜಯನಗರ ಎಂಬವರ ಮೇಲೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ತನಿಖೆ ಮತ್ತು ಸ್ಥಳ ಮಹಜರು ನಡೆಸಿದ ಬಳಿಕ ಸುಳ್ಯ ಪೊಲೀಸರು ಆರೋಪಿ ಗೋಪಾಲಕೃಷ್ಣರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದು ಸುಳ್ಯ ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ‘ ನಾನು ಹಾವೇರಿ ಜಿಲ್ಲೆಯವಳಾಗಿದ್ದು, ಸುಳ್ಯದ ಸೂರ್ತಿಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇನೆ. ನಾನು ಬಾಣಂತಿಯರನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಗೋಪಾಲಕೃಷ್ಣರ ಪರಿಚಯವಾಗಿದೆ. ಬಳಿಕ ಆತ ನನ್ನೊಂದಿಗೆ ಸಲುಗೆಯಾಗಿ ವರ್ತಿಸುತ್ತಿದ್ದ. 2025ನೇ ಜೂನ್ ತಿಂಗಳಲ್ಲಿ ಆತನ ಮನೆಗೆ ಬರುವಂತೆ ಒತ್ತಾಯಿಸಿ ಬಳಿಕ ನನ್ನನ್ನು ಆತನ ಮನೆಗೆ ಕರೆದೊಯ್ದು ಮದ್ಯವನ್ನು ಸೇವನೆ ಮಾಡಿಸಿ ಬಲಾತ್ಕಾರವಾಗಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಆ ಘಟನೆಯನ್ನು ಆತ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡು ಬಳಿಕ ಆಗಾಗ ನನಗೆ ಫೋನ್... - [ಪುತ್ತೂರು: ಆಕ್ಟಿವಾಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಲಾರಿ](https://prathidina.com/?p=79558): ಪುತ್ತೂರು: ಲಾರಿಯೊಂದು ಅಂಗಡಿಯೊಂದರ ಮುಂದೆ ನಿಲ್ಲಿಸಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಘಟನೆ ಪಡೀಲ್ ನಲ್ಲಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಪರಿಣಾಮ ವಾಹನಗಳಿಗೆ ಮತ್ತು ಅಂಗಡಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. - [ಪಿ.ಎ. ಕಾಲೇಜ್ ಆಫ್ ಫಾರ್ಮಸಿ 'ಎ' ಗ್ರೇಡ್ QCI ಮಾನ್ಯತೆ ಪಡೆದು ಕರ್ನಾಟಕದಲ್ಲಿ 6ನೇ ಸ್ಥಾನ](https://prathidina.com/?p=79556): ಮಂಗಳೂರು ಸಮೀಪದ ನಡುಪದವಿನ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಗುಣಮಟ್ಟದ ಶಿಕ್ಷಣ ಹಾಗೂ ಉನ್ನತ ಶೈಕ್ಷಣಿಕ ಮಾನದಂಡಗಳನ್ನು ಕಾಯ್ದುಕೊಳ್ಳುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸುವಂತೆ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ (QCI) ಮಾನ್ಯತೆಯಲ್ಲಿ ‘ಎ’ ಗ್ರೇಡ್ ಅನ್ನು ಪಡೆದುಕೊಂಡಿದೆ. ಕಾಲೇಜಿನಲ್ಲಿ ಪ್ರಸ್ತುತ ಡಿ.ಫಾರ್ಮ್, ಬಿ.ಫಾರ್ಮ್, ಎಂ.ಫಾರ್ಮ್ ಹಾಗೂ ಫಾರ್ಮ್.ಡಿ  ಕೋರ್ಸ್‌ಗಳನ್ನು ನಡೆಸಲಾಗುತ್ತಿದ್ದು, ಔಷಧ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಸಮಗ್ರ ಶಿಕ್ಷಣವನ್ನು ನೀಡುತ್ತಿದೆ. ಈ ಪ್ರತಿಷ್ಠಿತ ಮಾನ್ಯತೆಯೊಂದಿಗೆ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಕರ್ನಾಟಕ ರಾಜ್ಯದಲ್ಲಿ 6ನೇ ಸ್ಥಾನ ಹಾಗೂ ಅಖಿಲ ಭಾರತ ಮಟ್ಟದಲ್ಲಿ 51ನೇ ಸ್ಥಾನವನ್ನು ಪಡೆದುಕೊಂಡಿದೆ. ಈ ಸಾಧನೆಯು ಕಾಲೇಜಿನ ಶೈಕ್ಷಣಿಕ ಶ್ರೇಷ್ಠತೆ, ಗುಣಮಟ್ಟದ ಶಿಕ್ಷಣ, ಸಂಶೋಧನೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯ ಮೇಲಿನ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. QCI ಮಾನ್ಯತೆಯು ಶಿಕ್ಷಣದ ಗುಣಮಟ್ಟ, ಆಡಳಿತ ವ್ಯವಸ್ಥೆ, ಮೂಲಸೌಕರ್ಯ, ಸಂಶೋಧನೆ ಹಾಗೂ ನಿರಂತರ ಗುಣಮಟ್ಟದ ಸುಧಾರಣೆಯಲ್ಲಿ ಉನ್ನತ ಮಟ್ಟದ ಮಾನದಂಡಗಳನ್ನು ಕಾಯ್ದುಕೊಳ್ಳುವ ಸಂಸ್ಥೆಗಳಿಗೆ ನೀಡಲಾಗುವ ಪ್ರತಿಷ್ಠಿತ ಮಾನ್ಯತೆಯಾಗಿದೆ.ಈ ಮಹತ್ವದ ಸಾಧನೆಗಾಗಿ... - [ಮಂಗಳೂರು: ಕಾಲೇಜ್ ನಲ್ಲಿ ವಿದ್ಯಾರ್ಥಿಗಳ ತಪಾಸಣೆ ವೇಳೆ ಗಾಂಜಾ ಪತ್ತೆ: ಮೂವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ](https://prathidina.com/?p=79554): ಮಂಗಳೂರು : ಕಾಲೇಜಿನಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮಗಳ ಬಳಿಕ ಆಡಳಿತ ಮಂಡಳಿ ನಿಗಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ನಡೆಸಿದ ತಪಾಸಣೆಯಲ್ಲಿ ಸುಮಾರು 290 ಗ್ರಾಂ ಗಾಂಜಾ ಹಲವು ಸಣ್ಣ ಪ್ಯಾಕೆಟ್‌ಗಳಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಲೇಜು ಆಡಳಿತ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಂಜಾವನ್ನು ವಶಪಡಿಸಿಕೊಂಡು, ವಿದ್ಯಾರ್ಥಿಗಳ ವೈದ್ಯಕೀಯ ಪರೀಕ್ಷೆ ನಡೆಸಿದರು. ಪರೀಕ್ಷೆಯಲ್ಲಿ ಮೂವರೂ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ಎನ್‌ಡಿಪಿಎಸ್ (NDPS) ಕಾಯ್ದೆಯ ಸೆಕ್ಷನ್ 8(c) ಹಾಗೂ 27(b) (ಮಾದಕ ವಸ್ತು ಸೇವನೆ) ಸೇರಿದಂತೆ ವಿವಿಧ ಕಲಂಗಳಡಿ ಎಫ್‌ಐಆರ್ ದಾಖಲಿಸಲಾಗಿದೆ. ಕಾಲೇಜಿಗೆ ಗಾಂಜಾವನ್ನು ತಂದಿದ್ದಾನೆ ಎನ್ನಲಾದ ವಿದ್ಯಾರ್ಥಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿದ್ಯಾರ್ಥಿಯ ಶೈಕ್ಷಣಿಕ ಹಿನ್ನೆಲೆ ಹಾಗೂ ಪ್ರಕರಣದ ಸಂದರ್ಭವನ್ನು ಪರಿಗಣಿಸಿದ ನ್ಯಾಯಾಲಯವು ಶ್ಯೂರಿಟಿ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದೆ. ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸಿದ್ದ ಪೆಡ್ಲರ್‌ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಅಭಿಯಾನಗಳ... - [ದುಬೈ: ಜೆಬೆಲ್ ಅಲಿ ಕೈಗಾರಿಕಾ ಪ್ರದೇಶದಲ್ಲಿ ಭೀಕರ ಸ್ಫೋಟ: ಘಟನೆ ದೃಶ್ಯ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡುತ್ತಿದ್ದ ಇಬ್ಬರ ಬಂಧನ](https://prathidina.com/?p=79552): ದುಬೈ: ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ಉದ್ವಿಗ್ನತೆ ತೀವ್ರಗೊಂಡಿರುವ ಬೆನ್ನಲ್ಲೇ, ಯುಎಇಯ ದುಬೈನಲ್ಲಿರುವ ಪ್ರಸಿದ್ಧ ಜೆಬೆಲ್ ಅಲಿ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಭೀಕರ ಸರಣಿ ಸ್ಫೋಟಗಳು ಸಂಭವಿಸಿವೆ. ಕೇವಲ 20 ನಿಮಿಷಗಳ ಅಂತರದಲ್ಲಿ ಬರೋಬ್ಬರಿ ಏಳು ಸ್ಫೋಟಗಳು ಸಂಭವಿಸಿದ್ದು, ಕತ್ತಲ ರಾತ್ರಿಯಲ್ಲಿ ಆಕಾಶದ ತುಂಬಾ ದಟ್ಟವಾದ ಕಪ್ಪು ಹೊಗೆ ಆವರಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಸ್ಫೋಟದ ದೃಶ್ಯಾವಳಿಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ, ಈ ಘಟನೆಯು ಯಾವುದಾದರೂ ಕ್ಷಿಪಣಿ ಅಥವಾ ಡ್ರೋನ್ ದಾಳಿಯಿಂದ ಸಂಭವಿಸಿದೆಯೇ ಅಥವಾ ಕೈಗಾರಿಕಾ ಪ್ರದೇಶದಲ್ಲಿ ನಡೆದ ಆಕಸ್ಮಿಕ ಅಪಘಾತವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಮೆರಿಕ-ಇರಾನ್ ಸಮರದ ನಡುವೆ ಯೆಮೆನ್‌ನಿಂದ ಯುಎಇಯನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾಕಿ ಮಾಧ್ಯಮಗಳು ಪ್ರತಿಪಾದಿಸಿವೆಯಾದರೂ, ಯುಎಇ ಸರ್ಕಾರಿ ಮಾಧ್ಯಮಗಳು ಈ ಬಗ್ಗೆ ಯಾವುದೇ ಅಧಿಕೃತ ವಿವರಣೆಯನ್ನು ನೀಡಿಲ್ಲ. ಇನ್ನೊಂದೆಡೆ, ನಾಸಾದ ಉಪಗ್ರಹ ಉಷ್ಣ ಚಿತ್ರಣ (ಥರ್ಮಲ್ ಇಮೇಜರಿ)... - [ಖ್ಯಾತ ಖಳ ನಟ ಪ್ರದೀಪ್ ಸಿಂಗ್ ರಾವತ್ ನಿಧನ](https://prathidina.com/?p=79549): ಮುಂಬೈ: ಹಿಂದಿಯ ‘ಗಜನಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ಖಳನಾಯಕನ ಪಾತ್ರಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಹಿರಿಯ ನಟ ಪ್ರದೀಪ್ ಸಿಂಗ್ ರಾವತ್ ಅವರು ಮಂಗಳವಾರ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ರಕ್ತದ ಕ್ಯಾನ್ಸರ್ನಿಂದ ಬಳಲುತ್ತಿದ್ದ ರಾವತ್ ಅವರು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಅವರು ಮೃತಪಟ್ಟರು ಎಂದು ನಟಿ ವಿಪನಾ ಥಾಪಾ ತಿಳಿಸಿದ್ದಾರೆ. ರಾವತ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ನಟಿ ವಿಪನಾ ಥಾಪಾ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಿತ್ರರಂಗದ ಹಲವು ಕಲಾವಿದರು ಕೂಡ ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. - [ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್: ಪ್ರಕರಣ ದಾಖಲು](https://prathidina.com/?p=79547): ಮಂಗಳೂರು: ನಗರದ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಮೇಲೆ ಐದಾರು ಮಂದಿ ರ‍್ಯಾಂಗಿಂಗ್ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಪಾಂಡೇಶ್ವರ ಸಮೀಪದ ಗುಜ್ಜರಕೆರೆಯ ಚಹಾ ಅಂಗಡಿಯ ಬಳಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ನಡೆಸಿದ್ದಾರೆ ಎನ್ನಲಾಗಿದೆ. ರ‍್ಯಾಗಿಂಗ್ ಗೆ ಒಳಗಾದ ಇಬ್ಬರು ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. - [ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ](https://prathidina.com/?p=79546) - [ಬೆಳ್ತಂಗಡಿ: ಪ್ರತಿಭಟನೆ ವೇಳೆ  ದ್ವೇಷ ಭಾಷಣ ಮಾಡಿದ ಪ್ರಕರಣ: ರಿಯಾಝ್ ಫರಂಗಿಪೇಟೆ ಗೆ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆ  ಮತ್ತು ದಂಡ ವಿಧಿಸಿ ತೀರ್ಪು ನೀಡಿದ ನ್ಯಾಯಾಲಯ](https://prathidina.com/?p=79543): ಬೆಳ್ತಂಗಡಿ: ದಿನಾಂಕ: 23-07-2015 ರಂದು ಬೆಳ್ತಂಗಡಿ ತಾಲೂಕು ಕಛೇರಿ ಬಳಿ, ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ, ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 315/2015, ಕಲಂ: 153(A)295(A) ಭಾ.ದಂ.ಸಂ (IPC)ರಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸದ್ರಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೊಷಾರೊಪಣಾ ಪಟ್ಟಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ರಾಮಲಿಂಗಪ್ಪರವರು ಕಲಂ : 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಗೃಹ ವಾಸ ಮತ್ತು 10,000 ದಂಡ ವಿಧಿಸಿ ಅದೇಶಿಸಿರುತ್ತಾರೆ. ಸರಕಾರಿ ಅಭಿಯೋಜಕರಾದ ಶ್ರೀಮತಿ ಆಶೀತರವರು ಸಮರ್ಥವಾಗಿ ವಾದಮಂಡನೆ ನಡೆಸಿರುತ್ತಾರೆ. - [ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಮರ ಸಾಗಾಟ: ಉಪ್ಪಿನಂಗಡಿಯಲ್ಲಿ ಪತ್ತೆ ಹಚ್ಚಿದ ಅರಣ್ಯಾಧಿಕಾರಿಗಳು](https://prathidina.com/?p=79541): ಉಪ್ಪಿನಂಗಡಿ: ಸಕಲೇಶಪುರದಿಂದ ಮಂಗಳೂರಿಗೆ ಅಗತ್ಯ ದಾಖಲೆಗಳಿಲ್ಲದೆ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ 3, 2026ರಂದು ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿನ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಅರಣ್ಯ ಉತ್ಪನ್ನವನ್ನು ನಿಯಮಬಾಹಿರವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಿದರು. ಪರಿಶೀಲನೆ ವೇಳೆ ಅಗತ್ಯ ದಾಖಲೆಗಳಿಲ್ಲದೆ ಮರದ ದಿಮ್ಮಿಗಳನ್ನು ಸಾಗಾಟ ಮಾಡಿರುವುದು ಪತ್ತೆಯಾಗಿ, ವಾಹನ ಹಾಗೂ ಮರದ ದಿಮ್ಮಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಹೆಚ್.ಪಿ. ರಾಘವೇಂದ್ರ, ಉಪ ವಲಯ ಅರಣ್ಯಾಧಿಕಾರಿ ವಿನಯ್ ಕುಮಾರ್, ಗಸ್ತು ಅರಣ್ಯ ಪಾಲಕರಾದ ವಿನಯ ಚಂದ್ರ ಹಾಗೂ ದೀಕ್ಷಾ ಕೆ., ಚಾಲಕ ಕಿಶೋರ್ ಕುಮಾರ್ ಕೆ. ಭಾಗವಹಿಸಿದ್ದರು. ವಶಪಡಿಸಿಕೊಂಡ ವಾಹನ ಮತ್ತು ಮರದ ದಿಮ್ಮಿಗಳ ಒಟ್ಟು ಮೌಲ್ಯ ಸುಮಾರು ₹10 ಲಕ್ಷ ಎಂದು ಅಂದಾಜಿಸಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಸಿ.... - [ಕಾರ್ಕಳ: ಖಾಸಗಿ ಹೋಟೆಲ್ ನಲ್ಲಿ ಜೂಜಾಟ: ಪೊಲೀಸರಿಂದ ದಾಳಿ- ಆರು ಮಂದಿ ವಶಕ್ಕೆ](https://prathidina.com/?p=79539): ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಖಾಸಗಿ ಹೋಟೆಲ್ ಒಂದರಲ್ಲಿ ನಡೆಯುತ್ತಿದ್ದ ಜೂಜಾಟ ಅಡ್ಡೆಯ ಮೇಲೆ ಕಾರ್ಕಳ ಪಟ್ಟಣ ಪೊಲೀಸರು ದಾಳಿ ನಡೆಸಿ, ಆರು ಜನರನ್ನು ಬಂಧಿಸಿದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ವಿಶ್ವಾಸಾರ್ಹ ಮಾಹಿತಿಯ ಮೇರೆಗೆ ಕಾರ್ಕಳ ಪಟ್ಟಣ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಮತ್ತು ಅವರ ತಂಡ ಹೋಟೆಲ್ ಮೇಲೆ ದಾಳಿ ನಡೆಸಿದೆ. ಕಾರ್ಯಾಚರಣೆಯ ಸಮಯದಲ್ಲಿ, ಜೂಜಾಟದಲ್ಲಿ ತೊಡಗಿದ್ದಾಗ ಸುಜೀತ್, ಅಭಿಮನ್ಯು, ಮಹೇಶ್, ಧೀರಜ್, ನರೇಶ್ ಕುಮಾರ್ ಮತ್ತು ಪ್ರಶಾಂತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಯಶೋಧರ, ನೂರ್ ಮೊಹಮ್ಮದ್, ರವಿ ಶೆಟ್ಟಿ ಮತ್ತು ಸತೀಶ್ ಎಂದು ಗುರುತಿಸಲಾದ ಇತರ ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾದರು. ದಾಳಿಯ ಸಮಯದಲ್ಲಿ, ಪೊಲೀಸರು 16,350 ರೂ. ನಗದು, ಜೂಜಾಟಕ್ಕೆ ಬಳಸಿದ ಇಸ್ಪೀಟು ಎಲೆಗಳು ಮತ್ತು ಒಟ್ಟು 17,000 ರೂ. ಮೌಲ್ಯದ ಏಳು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂಜಾಟದ ಸ್ಥಳದಲ್ಲಿ ಬಳಸಲಾದ ಪೀಠೋಪಕರಣಗಳು ಮತ್ತು ಇತರ ವಸ್ತುಗಳು, ಸುಮಾರು 10,500 ರೂ. ಮೌಲ್ಯದ ಕುರ್ಚಿಗಳು... - [ಮಂಗಳೂರು: ಕಾರು, ಖಾಸಗಿ ಬಸ್ ಮತ್ತು ಲಾರಿ ನಡುವೆ ಸರಣಿ ಅಪಘಾತ](https://prathidina.com/?p=79536): ಮಂಗಳೂರು: ಕಾರು, ಖಾಸಗಿ ಬಸ್ ಮತ್ತು ಲಾರಿಯ ನಡುವೆ ಸರಣಿ ಅಪಘಾತ ಸಂಭವಿಸಿ ಮೂರು ವಾಹನಗಳು ಜಖಂಗೊಂಡ ಘಟನೆ ಮಂಗಳೂರಿನ ಯೆಯ್ಯಾಡಿ ರಸ್ತೆಯಲ್ಲಿ ಮಂಗಳವಾರ ಸಂಭವಿಸಿದೆ. ಕಾರಿನ ಚಾಲಕ ಎಡ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ. ಕಾರಿನ ಹಿಂದೆ ಚಲಿಸುತ್ತಿದ್ದ ಬಸ್ ಸಕಾಲಕ್ಕೆ ನಿಲ್ಲಿಸಲು ಸಾಧ್ಯವಾಗದೇ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಸ್ವಲ್ಪ ಸಮಯದ ನಂತರ, ಹಿಂದಿನಿಂದ ಬಂದ ಲಾರಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು, ಬಸ್ ಮತ್ತು ಲಾರಿಗೆ ಸ್ವಲ್ಪ ಹಾನಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ . ಅಪಘಾತದಲ್ಲಿ ಕೂಡ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಈ ಘಟನೆಯಿಂದ ಸ್ಥಳದಲ್ಲಿ ಸ್ವಲ್ಪ ಸಮಯವರೆಗೆ ಸಂಚಾರ ವ್ಯತ್ಯಯ ಉಂಟಾಗಿದೆ. - [ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ](https://prathidina.com/?p=79534) - [ಭಾರೀ ಮಳೆ ಹಿನ್ನೆಲೆ: ದ.ಕ ಜಿಲ್ಲೆಯ ಆಯ್ದ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ](https://prathidina.com/?p=79532): ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಸ್ಟ್ 4, 2026 (ಮಂಗಳವಾರ) ರಂದು ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (10ನೇ ತರಗತಿವರೆಗೆ) ಹಾಗೂ ಎಲ್ಲಾ ವಸತಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12ನೇ ತರಗತಿವರೆಗೆ), ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು ಮತ್ತು ವಸತಿ ಶಾಲೆ-ಕಾಲೇಜುಗಳಿಗೆ... - [ಪಿ.ಎ ಕಾಲೇಜ್ : ಪೇಸ್‌ನಲ್ಲಿ ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ಕುರಿತು ಎಫ್‌ಡಿಪಿ ಉದ್ಘಾಟನೆ](https://prathidina.com/?p=79531): ಮಂಗಳೂರು: ಪಿ.ಎ. ಕಾಲೇಜ್ ಆಫ್ ಎಂಜಿನಿಯರಿಂಗ್ (ಪೇಸ್), ಮಂಗಳೂರಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ‘ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ಸಿಸ್ಟಮ್ಸ್: ಪ್ರೆಸೆಂಟ್ & ಫ್ಯೂಚರ್’ ವಿಷಯದ ಕುರಿತು ಆಯೋಜಿಸಿರುವ ಒಂದು ವಾರದ AICTE ATAL Academy ಪ್ರಾಯೋಜಿತ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (ಎಫ್‌ಡಿಪಿ) ಸೋಮವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮವು ಆಗಸ್ಟ್ 3ರಿಂದ 8ರವರೆಗೆ ನಡೆಯಲಿದೆ. ಬೆಂಗಳೂರು ಬಿ.ಎಂ.ಎಸ್. ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಡಾ. ವೆಂಕಟೇಶ್ ಟಿ. ಲಮಾಣಿ ಮುಖ್ಯ ಅತಿಥಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಲೆಕ್ಟ್ರಿಕ್ ವಾಹನ (ಇವಿ) ಕ್ಷೇತ್ರವು ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ವ್ಯವಸ್ಥೆಗಳ ಮಹತ್ವ ಹೆಚ್ಚುತ್ತಿದೆ. ಬ್ಯಾಟರಿಯ ಸುರಕ್ಷತೆ, ಕಾರ್ಯಕ್ಷಮತೆ ಮತ್ತು ಬಾಳಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಥರ್ಮಲ್ ಮ್ಯಾನೇಜ್‌ಮೆಂಟ್ ತಂತ್ರಜ್ಞಾನಗಳ ಅಭಿವೃದ್ಧಿ ಅಗತ್ಯವಾಗಿದೆ ಎಂದು ಅವರು ಹೇಳಿದರು. ಗೌರವ ಅತಿಥಿಯಾಗಿದ್ದ ಪೇಸ್‌ನ ವಿದ್ಯಾರ್ಥಿ ವ್ಯವಹಾರಗಳ ಡೀನ್ ಹಾಗೂ CMSR ನಿರ್ದೇಶಕ ಡಾ. ಸಯ್ಯದ್ ಅಮೀನ್ ಅಹಮ್ಮದ್ ಮಾತನಾಡಿ, ಇವಿ ಉದ್ಯಮ... - [ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್ ಪಾಟೀಲ್, ಉಪ ಸಭಾಧ್ಯಕ್ಷರಾಗಿ ಎಸ್ ಪೊನ್ನಣ್ಣ ಆಯ್ಕೆ](https://prathidina.com/?p=79528): ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಚಟುವಟಿಕೆಗಳು ಗರಿಗೆದರಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಇದೀಗ ನೂತನವಾಗಿ 20 ಮಂದಿ ಶಾಸಕರು ಸಚಿವರಾಗಿ ಸೇರ್ಪಡೆಗೊಳ್ಳುತ್ತಿದ್ದಾರೆ. ಇಂದು ಸಂಜೆ ನಡೆದ ವಿಶೇಷ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜಭವನದಲ್ಲಿ ಪ್ರಮಾಣ ವಚನ ಬೋಧಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರಮುಖ ರಾಜಕೀಯ ಬೆಳವಣಿಗೆಗಳ ನಡುವೆಯೇ, ರಾಜ್ಯ ಶಾಸಕಾಂಗದ ಪ್ರಮುಖ ಹುದ್ದೆಗಳಿಗೂ ಹೊಸ ಸಾರಥಿಗಳನ್ನು ಆಯ್ಕೆ ಮಾಡಲಾಗಿದೆ. ವಿಧಾನಸಭೆಯ ನೂತನ ಸ್ಪೀಕರ್ ಆಗಿ ಹಿರಿಯ ನಾಯಕ ಜಿ.ಎಸ್. ಪಾಟೀಲ್ ಅವರು ಆಯ್ಕೆಯಾಗಿದ್ದರೆ, ಉಪ ಸಭಾಧ್ಯಕ್ಷರಾಗಿ ಎಸ್. ಪೊನ್ನಣ್ಣ ಅವರನ್ನು ನೇಮಕ ಮಾಡಲಾಗಿದೆ. ವಿಧಾನಪರಿಷತ್ತಿನಲ್ಲೂ ಪ್ರಮುಖ ಬದಲಾವಣೆಗಳು ನಡೆದಿದ್ದು, ನೂತನ ಸಭಾಪತಿಯಾಗಿ ಸಲೀಂ ಅಹಮದ್ ಹಾಗೂ ಉಪಸಭಾಪತಿಯಾಗಿ ಹಿರಿಯ ನಾಯಕಿ ಉಮಾಶ್ರೀ ಅವರು ಆಯ್ಕೆಯಾಗಿದ್ದಾರೆ. - [ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಖುಲಾಸೆ](https://prathidina.com/?p=79526): ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಸಹ-ಆರೋಪಿ ವಿನೋದ್ ತೋಮರ್ ಅವರನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ನಿರ್ದೋಷಿ ಎಂದು ತೀರ್ಪು ನೀಡಿ ಖುಲಾಸೆಗೊಳಿಸಿದೆ. ದೆಹಲಿಯ ರೌಸ್ ಅವೆನ್ಯೂ ಕೋರ್ಟ್‌ನ ಹೆಚ್ಚುವರಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅಶ್ವಿನಿ ಪನ್ವಾರ್ ಅವರ ಪೀಠವು ಸುದೀರ್ಘ ವಿಚಾರಣೆ ಮತ್ತು ವಾದ-ಪ್ರತಿವಾದ ಆಲಿಸಿದ ನಂತರ ಈ ತೀರ್ಪು ನೀಡಿದೆ. ಭಾರತೀಯ ಕುಸ್ತಿ ಫೆಡರೇಶನ್ (WFI) ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೇಶದ ಪ್ರಮುಖ ಮಹಿಳಾ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ಕುರಿತು ಎಫ್‌ಐಆರ್ ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು, ಸಮಗ್ರ ತನಿಖೆ ನಡೆಸಿ ಜೂನ್ 15, 2023 ರಂದು 1,500 ಪುಟಗಳ ಸುದೀರ್ಘ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಮಹಿಳಾ ಕುಸ್ತಿಪಟುಗಳು ಮಾಡಿದ ಆರೋಪಗಳ ಹಿನ್ನೆಲೆಯಲ್ಲಿ ಬ್ರಿಜ್ ಭೂಷಣ್... - [ಶ್ರೀಲಂಕಾ: 2019ರ ಈಸ್ಟರ್ ಸಂಡೇ ಬಾಂಬ್ ದಾಳಿ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ಶಿಕ್ಷೆ](https://prathidina.com/?p=79524): ಕೊಲಂಬೊ: 2019ರಲ್ಲಿ 279 ಜನರ ಸಾವಿಗೆ ಕಾರಣವಾದ ಈಸ್ಟರ್ ಸಂಡೇ ಬಾಂಬ್ ದಾಳಿಗೆ ಸಂಬಂಧಿಸಿದಂತೆ ಕ್ರಿಮಿನಲ್ ನಿರ್ಲಕ್ಷ್ಯದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶ್ರೀಲಂಕಾ ನ್ಯಾಯಾಲಯವು ಮಾಜಿ ಪೊಲೀಸ್ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ ಮಾಜಿ ಅಧಿಕಾರಿಗೆ ಮರಣದಂಡನೆ ವಿಧಿಸಿದೆ. ಮಾಜಿ ಪೊಲೀಸ್ ಮುಖ್ಯಸ್ಥ ಪೂಜಿತ್ ಜಯಸುಂದರ ಮತ್ತು ರಕ್ಷಣಾ ಸಚಿವಾಲಯದ ಮಾಜಿ ಕಾರ್ಯದರ್ಶಿ ಹೇಮಸಿರಿ ಫರ್ನಾಂಡೊ ಅವರನ್ನು ತ್ರಿಸದಸ್ಯ ಹೈಕೋರ್ಟ್ ಪೀಠವು ಶುಕ್ರವಾರ 2-1 ಬಹುಮತದ ನಿರ್ಧಾರದಲ್ಲಿ ದೋಷಿಗಳೆಂದು ತೀರ್ಮಾನಿಸಿ ಶಿಕ್ಷೆ ವಿಧಿಸಿದೆ. 2022ರಲ್ಲಿ ಇಬ್ಬರನ್ನೂ ಖುಲಾಸೆಗೊಳಿಸಿದ್ದ ತೀರ್ಪಿನ ವಿರುದ್ಧ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು. ಇದೀಗ ವಿಶೇಷ ತ್ವರಿತ ನ್ಯಾಯಾಲಯವಾಗಿ ಕಾರ್ಯನಿರ್ವಹಿಸುತ್ತಿರುವ ಸದರಿ ಪೀಠವು ಈ ಆದೇಶ ನೀಡಿದೆ. 2019ರಲ್ಲಿ ಮೂರು ಪ್ರವಾಸಿ ಹೋಟೆಲ್‌ಗಳು ಮತ್ತು ಮೂರು ಚರ್ಚ್‌ಗಳಲ್ಲಿ ಸಂಘಟಿತ ಬಾಂಬ್ ದಾಳಿಗಳನ್ನು ನಡೆಸಲಾಯಿತು. ಅವುಗಳಲ್ಲಿ ಎರಡು ಕ್ಯಾಥೊಲಿಕ್ ಮತ್ತು ಒಂದು ಪ್ರೊಟೆಸ್ಟಂಟ್ ಚರ್ಚ್ ಆಗಿತ್ತು. ದಾಳಿಯ ಕುರಿತು ಪದೇ ಪದೇ ಗುಪ್ತಚರ ಎಚ್ಚರಿಕೆಗಳು ಬಂದಿದ್ದರೂ, ಪೊಲೀಸ್ ಮತ್ತು ಗುಪ್ತಚರ ಅಧಿಕಾರಿಗಳು ಕಾರ್ಯನಿರ್ವಹಿಸಲು... - [ಇಂದು ಸಂಜೆ ನೂತನ ಸಚಿವರ ಪ್ರಮಾಣ ವಚನ: ಕರ್ನಾಟಕದ 20 ಮಂದಿ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕಾರ](https://prathidina.com/?p=79522): ಬೆಂಗಳೂರು: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಸಂಜೆ ನಡೆಯಲಿದೆ ಎಂದು ಲೋಕಭವನ ಮಾಹಿತಿ ನೀಡಿದೆ. ಲೋಕಭವನದ ಗಾಜಿನ ಮನೆಯಲ್ಲಿ ಸಮಾರಂಭ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಹೊರಭಾಗದಲ್ಲಿ ಜರ್ಮನ್‌ ಟೆಂಟ್‌ ಅಳವಡಿಸಲಾಗಿದ್ದು, ಲೋಕೋಪಯೋಗಿ ಇಲಾಖೆಯ ಮೂಲಕ ಮೂರು ದಿನಗಳ ಹಿಂದೆಯೇ ಸಿದ್ಧತಾ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದೆ. ಸಮಾರಂಭದ ಭದ್ರತಾ ದೃಷ್ಟಿಯಿಂದ ಎರಡು ಸಾವಿರ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಇಂದು ಪ್ರಮಾಣವಚನ ಸ್ವೀಕರಿಸಲಿರುವ ನೂತನ ಸಚಿವರ ಪಟ್ಟಿ:ಪಿ.ಎಂ. ನರೇಂದ್ರಸ್ವಾಮಿಶಿವರಾಜ್ ತಂಗಡಗಿರುದ್ರಪ್ಪ ಲಮಾಣಿಕೆ.ಎಸ್. ಬಸವಂತಪ್ಪಬಿ. ನಾಗೇಂದ್ರಟಿ. ರಘುಮೂರ್ತಿಜಮೀರ್ ಅಹ್ಮದ್ ಖಾನ್ರಿಜ್ವಾನ್ ಅರ್ಷದ್ಸಂತೋಷ್ ಲಾಡ್ಮಧು ಬಂಗಾರಪ್ಪಸಿ. ಪುಟ್ಟರಂಗಶೆಟ್ಟಿಮಂಕಾಳ ವೈದ್ಯಅಜಯ್ ಸಿಂಗ್ಎನ್. ಚಲುವರಾಯಸ್ವಾಮಿಕೆ.ಎಂ. ಶಿವಲಿಂಗೇಗೌಡಹೆಚ್.ಸಿ. ಬಾಲಕೃಷ್ಣಗಾಯಿತ್ರಿ ಶಾಂತೇಗೌಡಬಸವರಾಜ ರಾಯರೆಡ್ಡಿವಿಜಯಾನಂದ ಕಾಶಪ್ಪನವರ್ಲಕ್ಷ್ಮಣ್ ಸವದಿ ಸಂಪುಟ ವಿಸ್ತರಣೆಯೊಂದಿಗೆ ರಾಜ್ಯ ರಾಜಕಾರಣದಲ್ಲಿ ನೂತನ ಅಧ್ಯಾಯ ಆರಂಭವಾಗಲಿದ್ದು, ನೂತನ ಸಚಿವರಿಗೆ ಶೀಘ್ರದಲ್ಲೇ ಖಾತೆಗಳ ಹಂಚಿಕೆಯಾಗುವ ಸಾಧ್ಯತೆಯಿದೆ. - [ಕಲ್ಲಡ್ಕ: ಚಾಲಕನ ನಿಯಂತ್ರಣ ಕಳೆದು ಚರಂಡಿಗೆ ಬಿದ್ದ ಕಾರು](https://prathidina.com/?p=79521): ಕಲ್ಲಡ್ಕ: ನಿಯಂತ್ರಣ ತಪ್ಪಿ ಕಾರೊಂದು ಗುಂಡಿಗೆ ಬಿದ್ದ ಘಟನೆ ಕಲ್ಲಡ್ಕ ಬಳಿಯ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. - [ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ](https://prathidina.com/?p=79519) - [ಬಂಟ್ವಾಳ: ನಾಪತ್ತೆಯಾಗಿದ್ದ ಜೀವನ್ ಪಿಂಟೋ ಮೃತದೇಹ ಪತ್ತೆ: NDRF ನಿರಂತರ ಕಾರ್ಯಾಚರಣೆ ಬಳಿಕ ಪಂಬದಗದ್ದೆ ಎಂಬಲ್ಲಿ ಪತ್ತೆ](https://prathidina.com/?p=79517): ಬಂಟ್ವಾಳ: ಕೊಯಿಲ ಸಮೀಪದ ಹೋರಂಗಳದಲ್ಲಿ ಶನಿವಾರ ರಾತ್ರಿ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ನಾಪತ್ತೆಯಾಗಿದ್ದ ಜೀವನ್ ಪಿಂಟೋ ಅವರ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ಶನಿವಾರ ರಾತ್ರಿ ಸಂಭವಿಸಿದ ಘಟನೆಯ ಬಳಿಕ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ (NDRF) ತಂಡಗಳು ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಿದ್ದವು. ಮಳೆ ಹಾಗೂ ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದ್ದರೂ ಶೋಧ ಮುಂದುವರಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಅರಳ ಗ್ರಾಮದ ಪಂಬದಗದ್ದೆ ಸಮೀಪದ ನೀರಿನಲ್ಲಿ ಜೀವನ್ ಪಿಂಟೋ ಅವರ ಮೃತದೇಹ ಪತ್ತೆಯಾಗಿದೆ ಎಂದು ಎನ್‌ಡಿಆರ್‌ಎಫ್ ತಂಡ ಮಾಹಿತಿ ನೀಡಿದೆ. ಮೃತದೇಹವನ್ನು ಮೇಲಕ್ಕೆತ್ತಿ ಮುಂದಿನ ಕಾನೂನು ಪ್ರಕ್ರಿಯೆಗಾಗಿ ಸಂಬಂಧಿತ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲದಲ್ಲಿ ನದಿ, ಹೊಳೆ ಹಾಗೂ ತೋಡುಗಳ ನೀರಿನ ಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. - [ಆಗಸ್ಟ್ 3 ಸೋಮವಾರ ದ.ಕ ಜಿಲ್ಲೆಯ ಈ ಕೆಳಗಿನ ತಾಲೂಕಿನ ಶಾಲಾ ಕಾಲೇಜ್ ಗಳಿಗೆ ರಜೆ ಘೋಷಣೆ](https://prathidina.com/?p=79515): ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಸ್ಟ್ 3 (ಸೋಮವಾರ)ರಂದು ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (10ನೇ ತರಗತಿವರೆಗೆ), ವಸತಿ ಶಾಲೆಗಳು ಸೇರಿ ರಜೆ ಘೋಷಿಸಲಾಗಿದೆ.ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ (12ನೇ ತರಗತಿವರೆಗೆ), ವಸತಿ ಶಾಲೆ-ಕಾಲೇಜುಗಳು ಸೇರಿ ರಜೆ ಅನ್ವಯವಾಗಲಿದೆ.ಜಿಲ್ಲಾಧಿಕಾರಿಗಳು ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ, ಸಮುದ್ರ ತೀರ ಮತ್ತು ನೀರು... - [ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ಮೃತದೇಹ ಪತ್ತೆ](https://prathidina.com/?p=79513): ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಬಳಿ ಹರಿಯುವ ನೇತ್ರಾವತಿ ನದಿ ದಡದಲ್ಲಿ ಇಂದು (ಆ. 2) ಮಧ್ಯಾಹ್ನ ಸುಮಾರು 3.00 ಗಂಟೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ. ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಪುರುಷ ಕಾಣೆಯಾದ ಬಗ್ಗೆ ದೂರು ದಾಖಲಾಗಿದ್ದರೆ ಅಥವಾ ಮೃತನ ಬಗ್ಗೆ ಮಾಹಿತಿ ಇದ್ದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. - [ಬಂಟ್ವಾಳ: ಮತ್ತೆ ಏರಿಕೆಯಾದ ನೇತ್ರಾವತಿ ನೀರಿನ ಮಟ್ಟ: 8.3 ಮೀ ನಲ್ಲಿ ಹರಿಯುತ್ತಿರುವ ನೇತ್ರಾವತಿ](https://prathidina.com/?p=79511): ಬಂಟ್ವಾಳ: ಬೆಳಿಗ್ಗೆ ಇಳಿಮುಖವಾಗಿದ್ದ ನೇತ್ರಾವತಿ ನದಿಯ ನೀರಿನ ಮಟ್ಟ ಮಧ್ಯಾಹ್ನದ ಬಳಿಕ ಮತ್ತೆ ಏರಿಕೆಯಾಗಿದ್ದು, ಬಂಟ್ವಾಳ ಭಾಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆಳಿಗ್ಗೆ ಸುಮಾರು 7.4 ಮೀಟರ್ ಇದ್ದ ನೀರಿನ ಮಟ್ಟ ಮಧ್ಯಾಹ್ನ 1 ಗಂಟೆಯ ಬಳಿಕ ಏಕಾಏಕಿ ಏರಿಕೆಯಾಗಿ 8.3 ಮೀಟರ್ ತಲುಪಿದೆ. ಅಪಾಯದ ಮಟ್ಟ 8.5 ಮೀಟರ್ ಆಗಿರುವ ಹಿನ್ನೆಲೆಯಲ್ಲಿ ನದಿ ತೀರದ ನಿವಾಸಿಗಳು ಹಾಗೂ ತಗ್ಗು ಪ್ರದೇಶಗಳ ಜನರು ಎಚ್ಚರಿಕೆಯಿಂದ ಇರಲು ಆಡಳಿತ ಸೂಚಿಸಿದೆ. ಘಟ್ಟ ಪ್ರದೇಶದಲ್ಲಿ ಮುಂದುವರಿದ ಮಳೆಯ ಪರಿಣಾಮ ನದಿಯ ಹರಿವು ಮತ್ತೆ ಹೆಚ್ಚಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಲಾರಂಭಿಸಿದೆ. ಬಂಟ್ವಾಳ ಪೇಟೆ ಮೂಲಕ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪೇಟೆ ರಸ್ತೆ ಕೋಟೆಕಣಿ ಎಂಬಲ್ಲಿ ರಸ್ತೆಗೆ ನೀರು ಬಂದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದೇ ವೇಳೆ ಬಡ್ಡಕಟ್ಟೆ ಸಮೀಪದ ರಾಯರಚಾವಡಿ–ಕೋಟೆಕಣಿ ರಸ್ತೆ ಮೇಲೆಯೂ ಮತ್ತೆ ನೀರು ಹರಿದು ಬಂದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಈ ಮಾರ್ಗದಲ್ಲಿ ವಾಹನ... - [ತೀರ್ಥಹಳ್ಳಿ: ವರುಣನ ಆರ್ಭಟಕ್ಕೆ ಗುಡ್ಡ ಕುಸಿತ: ಒಂದೇ ಕುಟುಂಬದ ಮೂವರು ಮೃತ್ಯು](https://prathidina.com/?p=79508): ಶಿವಮೊಗ್ಗ: ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರ ಬೆಳಗಿನ ಜಾವ 2:30ರ ವೇಳೆ ನಡೆದಿದೆ. ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ (35), ನಾಗವೇಣಿ (28), ಸಂತೋಷ (3) ಎಂದು ಗುರುತಿಸಲಾಗಿದೆ. ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೂವರ ಮೃತದೇಹಗಳು ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದು, ಹೊರ ತೆಗೆಯಲು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. - [ವಿಟ್ಲ: ತೋಟದ ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವೃದ್ಧ ಮೃತ್ಯು](https://prathidina.com/?p=79507): ವಿಟ್ಲ: ಮನೆ ಸಮೀಪದ ಅಡಿಕೆ ತೋಟದಲ್ಲಿ ನೀರು ಹರಿಯುವ ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ – ವೃದ್ಧರೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆ.1ರಂದು ಮೃತಪಟ್ಟಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ನಿವಾಸಿ ಗಿರಿಯಪ್ಪ ಸಪಲ್ಯ (75 ವ.) ಮೃತಪಟ್ಟವರು. ಗಿರಿಯಪ್ಪರವರು ಕೆಲದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕದ ದಿನಗಳಲ್ಲಿ ಅವರು ಮನೆ ಸಮೀಪದ ತೋಟದಲ್ಲಿ ನೀರು ಹೋಗುವ ಚರಂಡಿಯಲ್ಲಿ ಗಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ - [ಮಂಗಳೂರು: ರೈಲ್ವೆ ಹಳಿಯಲ್ಲಿ ಭೂಕುಸಿತ: ಮಂಗಳೂರು-ಬೆಂಗಳೂರು ನಡುವಿನ ಸಂಚಾರ ರದ್ದು](https://prathidina.com/?p=79505): ಮಂಗಳೂರು/ಹುಬ್ಬಳ್ಳಿ: ನಿರಂತರ ಧಾರಾಕಾರ ಮಳೆಯಿಂದ ಮೈಸೂರು ವಿಭಾಗದ ಎಡಕುಮೇರಿ–ಶ್ರೀವಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಯಲ್ಲಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಮಂಗಳೂರು–ಬೆಂಗಳೂರು ನಡುವಿನ ಎರಡು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಆಗಸ್ಟ್‌ 2ರಂದು ರದ್ದುಗೊಳಿಸಲಾಗಿದೆ. ದಕ್ಷಿಣ ಪಶ್ಚಿಮ ರೈಲ್ವೆ ಪ್ರಕಟಿಸಿರುವ ಬುಲೆಟಿನ್‌ ಪ್ರಕಾರ, ಆಗಸ್ಟ್‌ 1ರಂದು ರಾತ್ರಿ ಸುಮಾರು 8.45ಕ್ಕೆ ಎಡಕುಮೇರಿ–ಶ್ರೀವಾಗಿಲು ನಡುವಿನ ರೈಲು ಹಳಿಯ ಮೇಲೆ ಭೂಕುಸಿತ ಉಂಟಾಗಿದೆ. ನಿರಂತರ ಮಳೆಯಿಂದ ಪುನಃ ಪುನಃ ಭೂಕುಸಿತ ಸಂಭವಿಸುತ್ತಿರುವುದರಿಂದ ಹಳಿ ಮರುಸ್ಥಾಪನೆ ಕಾರ್ಯ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಎಕ್ಸ್‌ಪ್ರೆಸ್ ಹಾಗೂ ರೈಲು ಸಂಖ್ಯೆ 16575 ಯಶವಂತಪುರ–ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್‌ಗಳ ಆಗಸ್ಟ್‌ 2ರ ಸಂಚಾರವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ಕಡಿಮೆ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಹಳಿ ದುರಸ್ತಿ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ರೈಲು ಸಂಚಾರವನ್ನು ಆದಷ್ಟು ಬೇಗ ಪುನರಾರಂಭಿಸಲು ಪ್ರಯತ್ನಿಸಲಾಗುತ್ತಿದೆ ಎಂದು ದಕ್ಷಿಣ ಪಶ್ಚಿಮ ರೈಲ್ವೆಯ ಮುಖ್ಯ... - [ಬಂಟ್ವಾಳ: ನೇತ್ರಾವತಿ ನದಿಯ ನೀರಿನ ಮಟ್ಟ ಇಳಿಕೆ: ಸಹಜ ಸ್ಥಿತಿಯತ್ತ ಮರಳಿದ ಬಂಟ್ವಾಳ](https://prathidina.com/?p=79503): ಬಂಟ್ವಾಳ : ಆಗಸ್ಟ್ 1ರಂದು ಸಂಜೆ ಸುರಿದ ಭಾರೀ ಮಳೆಯ ಪರಿಣಾಮ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿದು ಪಾಣೆಮಂಗಳೂರು, ಬಂಟ್ವಾಳ ಸೇರಿದಂತೆ ಹಲವೆಡೆ ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಭಾನುವಾರ (ಆಗಸ್ಟ್ 2) ಬೆಳಗಿನ ಜಾವದಿಂದ ನದಿಯ ನೀರಿನ ಮಟ್ಟ ಇಳಿಕೆಯಾಗಿದ್ದು, ಪರಿಸ್ಥಿತಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಭಾನುವಾರ ಬೆಳಿಗ್ಗೆ ಸುಮಾರು 7.4 ಮೀಟರ್ ಎತ್ತರದಲ್ಲಿ ನೇತ್ರಾವತಿ ನದಿ ಹರಿಯುತ್ತಿದ್ದು, ಪ್ರವಾಹದ ತೀವ್ರತೆ ಗಣನೀಯವಾಗಿ ಕಡಿಮೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಾಣೆಮಂಗಳೂರು ಆಲಡ್ಕ ಪ್ರದೇಶದ 15 ಮನೆಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು. ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಅವರ ನೇತೃತ್ವದಲ್ಲಿ ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಲಾಗಿತ್ತು. ಶನಿವಾರ ರಾತ್ರಿ ಜಕ್ರಿಬೆಟ್ಟು ಸೇರಿದಂತೆ ಹಲವೆಡೆ ನದಿ ನೀರು ರಸ್ತೆಗೆ ಹರಿದು ಬಂದಿದ್ದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬಡ್ಡಕಟ್ಟೆ ಬಸ್ ನಿಲ್ದಾಣಕ್ಕೂ ನೀರು ನುಗ್ಗಿದ... - [ಬಂಟ್ವಾಳ: ನೇತ್ರಾವತಿ ನೀರಿನ ಮಟ್ಟ 8.4: 8.5ಮೀ ಅಪಾಯದ ಮಟ್ಟ-ಅಜಿಲಮೊಗರು, ಆಲಡ್ಕ, ಜಲಾವೃತ](https://prathidina.com/?p=79501): ಬಂಟ್ವಾಳ: ಘಟ್ಟ ಪ್ರದೇಶ ಹಾಗೂ ಕರಾವಳಿ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನೇತ್ರಾವತಿ ನದಿಯ ನೀರಿನ ಮಟ್ಟ ಅಪಾಯದ ಮಟ್ಟದತ್ತ ವೇಗವಾಗಿ ಏರಿಕೆಯಾಗುತ್ತಿದೆ. ಸದ್ಯ ನದಿಯ ನೀರಿನ ಮಟ್ಟ 8.4 ಮೀಟರ್ ದಾಖಲಾಗಿದ್ದು, 8.5 ಮೀಟರ್ ಅಪಾಯದ ಮಟ್ಟದ ಸೂಚ್ಯಂಕವಾಗಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಭಾರೀ ಮಳೆಯ ಜೊತೆಗೆ ಎ.ಎಂ.ಆರ್. ಹಾಗೂ ಎಂ.ಆರ್.ಪಿ.ಎಲ್. ನೀರಕಟ್ಟೆ ಡ್ಯಾಂಗಳಿಂದಲೂ ನೀರು ಹರಿಬಿಡಲಾಗಿರುವುದರಿಂದ ನದಿಯ ಹರಿವು ಮತ್ತಷ್ಟು ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ನದಿ ನೀರು ಏರಿಕೆಯಾಗಿರುವ ಪರಿಣಾಮ ಬಂಟ್ವಾಳ ಪೇಟೆಯ ಮೂಲಕ ಜಕ್ರಿಬೆಟ್ಟು ಸಂಪರ್ಕಿಸಿ ಬೆಳ್ತಂಗಡಿ ಕಡೆಗೆ ಸಾಗುವ ಹೆದ್ದಾರಿಯ ಕೋಟೆಕಣಿ ಪ್ರದೇಶದಲ್ಲಿ ರಸ್ತೆ ಮೇಲೆ ನೀರು ಹರಿದಿದ್ದು, ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಬಂಟ್ವಾಳ–ಬೆಳ್ತಂಗಡಿ ಸಂಪರ್ಕ ತಾತ್ಕಾಲಿಕವಾಗಿ ಕಡಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಬಿ.ಸಿ.ರೋಡ್‌ನಿಂದ ಧರ್ಮಸ್ಥಳಕ್ಕೆ ತೆರಳುವ ವಾಹನ ಸವಾರರು ಬೈಪಾಸ್... - [ಬಂಟ್ವಾಳ: ನೇತ್ರಾವತಿ ನದಿಯ ನೀರಿನ ಮಟ್ಟ ಏರಿಕೆ: ಅಪಾಯದ ಮಟ್ಟ ತಲುಪಿದರೆ ಮುಂಜಾಗ್ರತಾ ಕ್ರಮವಾಗಿ ಜನರನ್ನು ಸ್ಥಳಾಂತರಿಸಲು ಸೂಚನೆ](https://prathidina.com/?p=79499): ಬಂಟ್ವಾಳ: ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಕರಾವಳಿ ಭಾಗದಲ್ಲಿಯೂ ಉತ್ತಮ ಮಳೆಯಾಗುತ್ತಿರುವ ಪರಿಣಾಮ ನೇತ್ರಾವತಿ ನದಿಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದಾರೆ. ಶನಿವಾರ ಸಂಜೆ 4 ಗಂಟೆಗೆ ನೇತ್ರಾವತಿ ನದಿಯ ನೀರಿನ ಮಟ್ಟ 5.7 ಮೀಟರ್ ದಾಖಲಾಗಿದ್ದರೆ, ಸಂಜೆ 6 ಗಂಟೆಯ ವೇಳೆಗೆ ಅದು ಏಕಾಏಕಿ 7.7 ಮೀಟರ್‌ಗೆ ಏರಿಕೆಯಾಗಿದೆ. ನದಿಯ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಮಳೆ ಮುಂದುವರಿದರೆ ಯಾವುದೇ ಕ್ಷಣದಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ತಾಲೂಕು ಕೇಂದ್ರವನ್ನು ಬಿಟ್ಟು ತೆರಳದಂತೆ ಸೂಚನೆ ನೀಡಲಾಗಿದೆ. ನದಿಯ ನೀರು ಅಪಾಯದ ಮಟ್ಟ ತಲುಪಿದರೆ ನದಿ ತೀರದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಹಾಗೂ ಜನರಿಗೆ ಅಗತ್ಯ ಮುನ್ನೆಚ್ಚರಿಕೆ ನೀಡಲು ಕ್ರಮ... - [ನಾರ್ಶ: 28ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿಗೆ ಬೀಳ್ಕೋಡುಗೆ](https://prathidina.com/?p=79497): ನಾರ್ಶ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾರ್ಶ ಮೈದಾನ ಇಲ್ಲಿ ಸುಮಾರು 28 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆಸಲ್ಲಿಸಿ, ಶಾಲೆಯಲ್ಲಿ 10 ವರ್ಷಗಳ ಕಾಲ ಮಕ್ಕಳಿಗೆ ಅಕ್ಷರ ಜ್ಞಾನ ಕಳಿಸಿ, ಇಂದು ನಿವೃತ್ತಿ ಹೊಂದಿದ ಹೆಮ್ಮೆಯ ಶಿಕ್ಷಕಿಯಾದ ಟೇರಿ ಟೀಚರ್ ರವರಿಗೆ ಇಂದು ಬೀಳ್ಕೊಡಲಾಯಿತು. - [ಉಡುಪಿ: ಮಹಿಳೆಗೆ ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು](https://prathidina.com/?p=79494): ಉಡುಪಿ: ಉಡುಪಿಯ ಕೋರ್ಟ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಬಸ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೃತರನ್ನು ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮಿ ಮಂಜು ಕೊಳ ಎಂದು ಗುರುತಿಸಲಾಗಿದ್ದು, ಅವರು ಹಿಂದೂ ಯುವ ಸೇನಾ ನಾಯಕ ಮಂಜು ಕೊಳ ಅವರ ಪತ್ನಿ. ಮಹಿಳೆ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಉಡುಪಿ ಸಂಚಾರ ಪೊಲೀಸರ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ. - [ಕುಂದಾಪುರ: ಶೂಟೌಟ್ ಪ್ರಕರಣ: ಆರೋಪಿ ಬಂಧನ](https://prathidina.com/?p=79492): ಉಡುಪಿ: ತಾಲೂಕಿನ ಚರ್ಚ್‌ ರಸ್ತೆಯಲ್ಲಿ ಜು.31 ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಿದ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂಲದ ಪ್ರಸ್ತುತ ಕುಂದಾಪುರದ ಫ್ಲ್ಯಾಟ್‌ವೊಂದರಲ್ಲಿ ವಾಸವಿರುವ ಡೆರಿಕ್ ಕ್ರಾಸ್ತಾ (55) ಬಂಧಿತ ಆರೋಪಿ. ಹೆಬ್ರಿ ಮೂಲದ ಪ್ರಸ್ತುತ ಬಾರ್ಕೂರು ಕಚ್ಚೂರು ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಐವನ್ ರಿಚರ್ಡ್ ಮಸ್ಕರೇನಸ್ ಯಾನೆ ಮುನ್ನಾ (45) ಎನ್ನುವರನ್ನು ಗುಂಡಿಕ್ಕಿ ಹತ್ಯೆ ನಡೆಸಿದ ಆರೋಪಿ ಡೆರಿಕ್ ತಲೆಮರೆಸಿಕೊಂಡಿದ್ದ. ಭಟ್ಕಳದ ಬೆಳಕೆ ಹೇರಬುಡಿಕೆ ಎಂಬಲ್ಲಿ ಶನಿವಾರ ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ತನಿಖೆ ಮುಂದುವರಿದಿದೆ ಎಂದು ಎಸ್ಪಿ ತಿಳಿಸಿದ್ದಾರೆ. - [ಬಂಟ್ವಾಳ: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ಆರೋಪ ಸಾಬೀತು: ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ ಮತ್ತು ದಂಡ](https://prathidina.com/?p=79491): ಬಂಟ್ವಾಳ: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಂಗಳೂರು ವಿಶೇಷ ತ್ವರಿತ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ಎರಡು ವರ್ಷ ಆರು ತಿಂಗಳ ಜೈಲು ಶಿಕ್ಷೆ ಹಾಗೂ ₹40,000 ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಕರಣವು 2025ರ ಜೂನ್ 23ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಅಂದಿನ ತನಿಖಾಧಿಕಾರಿಗಳಾದ ಪಿಎಸ್‌ಐ ಕೀರಪ್ಪ ಘಟಕಾಂಬಳೆ ಹಾಗೂ ಪಿಎಸ್‌ಐ ಕೃಷ್ಣಕಾಂತ ಪಾಟೀಲ್ ನಡೆಸಿ, ಆರೋಪಿತನಾದ ಮಣಿನಾಲ್ಕೂರು ನಿವಾಸಿ ಮೋನಪ್ಪ ನಾಯ್ಕ (52) ವಿರುದ್ಧ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ವಿಶೇಷ ತ್ವರಿತ ನ್ಯಾಯಾಲಯದ ನ್ಯಾಯಾಧೀಶರಾದ ಮೋಹನ್ ಜೆ.ಎಸ್. ಅವರು 2026ರ ಜುಲೈ 31ರಂದು ತೀರ್ಪು ಪ್ರಕಟಿಸಿ, ಆರೋಪಿಗೆ ವಿವಿಧ ಅಪರಾಧಗಳಿಗೆ ವಿಧಿಸಲಾದ ಶಿಕ್ಷೆಗಳು ಏಕಕಾಲದಲ್ಲಿ... - [ಮೂಡುಬಿದಿರೆ: ಅಕ್ಕನೊಂದಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣು](https://prathidina.com/?p=79488): ಮೂಡಬಿದಿರೆ: ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಯುವಕನೋರ್ವ ತನ್ನ ಅಕ್ಕನೊಂದಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ ಅಬುಸಾಲಿ ಇಸ್ಮಾಯಿಲ್ ಎಂಬವರ ಪುತ್ರ ಸಯ್ಯದ್ ಅನ್ವರ್ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಬೆಳುವಾಯಿಯಲ್ಲಿ ಕಳೆದ ಕೆಲವು ಸಮಯದಿಂದ ಇಸ್ಮಾಯಿಲ್ ಎಂಬವರ ಬಾಡಿಗೆ ಮನೆಯಲ್ಲಿ ಪತ್ನಿ, ಮಗುವಿನೊಂದಿಗೆ ವಾಸವಾಗಿದ್ದ ಅನ್ವರ್ ಮತ್ತು ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತೆನ್ನಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ಮೀನಿನ ಟೆಂಪೋದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅನ್ವರ್ ಕಳೆದ ಕೆಲವು ಸಮಯದಿಂದ ಕೆಲಸವಿಲ್ಲದೆ ಮನೆಯಲ್ಲಿದ್ದು, ಒಂದೆರಡು ದಿನಗಳ ಹಿಂದೆ ಬೆಂಗಳೂರಿಗೆ ಹೋಗಿ ಬಂದಿದ್ದಾರೆ. ಗುರುವಾರ ಮತ್ತೆ ಪತಿ-ಪತ್ನಿ ನಡುವೆ ಜಗಳವಾಗಿದ್ದು, ಪತ್ನಿ ತನ್ನ ಎರಡು ವರ್ಷದ ಪುತ್ರನೊಂದಿಗೆ ತವರು ಮನೆಗೆ ತೆರಳಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತನ್ನ ಅಕ್ಕನಿಗೆ ವೀಡಿಯೊ ಕರೆ ಮಾಡಿ,... - [ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ](https://prathidina.com/?p=79487) - [ಮಳೆಯ ಪ್ರಯುಕ್ತ ನಾಳೆ ಶನಿವಾರ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ](https://prathidina.com/?p=79485): ಮಳೆಯ ಪ್ರಯುಕ್ತ ನಾಳೆ ಶನಿವಾರ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆಯನ್ನು ಮಾನ್ಯ ಜಿಲ್ಲಾಧಿಕಾರಿಯವರು ಘೋಷಿಸಿರುತ್ತಾರೆ. ಪ್ರೌಢ ಶಾಲೆ, ಪಿಯು ವರೆಗೆ ದ.ಕ ಜಿಲ್ಲಾಧಿಕಾರಿ ಅವರು ರಜೆ ಘೋಷಣೆ ಮಾಡಿದ್ದಾರೆ. - [ಕನ್ಯಾನ: EDU-SUPPORTERS ವತಿಯಿಂದ ದಾನಿಗಳ ಮತ್ತು ದುಲ್ ಪುಖಾರ್ ಗಲ್ಫ್ ಸಮಿತಿ ಸಹಕಾರದಲ್ಲಿ ಕನ್ಯಾನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಶುಲ್ಕ ಪಾವತಿ ](https://prathidina.com/?p=79483): ವಿಟ್ಲ: Edu -Supporters Kanyana ಇದರ ವತಿಯಿಂದಕನ್ಯಾನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 15 ಬಡ ವಿದ್ಯಾರ್ಥಿಗಳ ಕಾಲೇಜು ಶುಲ್ಕ ₹90,000 ವನ್ನುಶಿಕ್ಷಣ ಪ್ರೇಮಿ ಕೊಡುಗೈ ದಾನಿಗಳ ಹಾಗೂ ದುಲ್ ಪುಖಾರ್ ಗಲ್ಫ್ ಸಮಿತಿಯ ಸಹಕಾರದೊಂದಿಗೆ ಪಾವತಿಸಲಾಯಿತು. ಈ ಸಂದರ್ಭದಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ಕನ್ಯಾನ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ಕನ್ಯಾನ ಪ್ರಮುಖರಾದ ಆಸಿಫ್ ಬನಾರಿ ಜಮಾಲ್ ಕನ್ಯಾನ ರಹೀಂ ನೆಕ್ಲಾಜೆ ಮತ್ತು ಕಾಲೇಜು ಉಪನ್ಯಾಸಕರು ಉಪಸ್ಥಿತರಿದ್ದರು ಈ ಮಹತ್ಕಾರ್ಯಕ್ಕೆ ಸಹಕರಿಸಿದಎಲ್ಲಾ ದಾನಿಗಳಿಗೂ ಹಾಗೂ ಸಹಕಾರ ನೀಡಿದ ಪ್ರತಿಯೊಬ್ಬರಿಗೂಹೃತ್ಪೂರ್ವಕ ಕೃತಜ್ಞತೆಗಳು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. - [ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ](https://prathidina.com/?p=79480): ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ. 2013ರ ನವೆಂಬರ್ 18ರಂದು ಆರೋಪಿಗಳಾದ ಪ್ರಜ್ವಲ್, ಅರುಣ್ ಅಮೀನ್, ಆದಿತ್ಯ ಸಾಲ್ಯಾನ್ ಮತ್ತು ಅಬ್ದುಲ್ ರಿಯಾಝ್ ಎಂಬವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ್ದ ಬಗ್ಗೆ ಮಂಗಳೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಶುಕ್ರವಾರ ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ್ದಾರೆ. - [ಕಡಬ: ಗಾಳಿಗೆ ಅಡಿಕೆ ಮರ ಮುರಿದು ಬಿದ್ದು ವ್ಯಕ್ತಿ ಸಾವು](https://prathidina.com/?p=79478): ಕಡಬ: ಮಳೆಗಾಳಿಗೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ನಡೆದಿದೆ. ಯಾದವ ಗೌಡ (66) ಎಂಬವರು ಮೃತಪಟ್ಟವರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬೀಸಿದ ಮಳೆಗಾಳಿಗೆ ಅಡಿಕೆಮರ ಮುರಿದು ಬಿದ್ದು ಯಾದವ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಗಣೇಶ್ ಸವಣೂರ, ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. - [ನಾಲ್ಕು ಮಹಡಿಯ ವಸತಿ ಕಟ್ಟಡ ಕುಸಿತ: 9 ಮಂದಿ ಮೃತ್ಯು, ಹಲವಾರು ಮಂದಿ ಸಿಲುಕಿರುವ ಶಂಕೆ](https://prathidina.com/?p=79476): ಮುಂಬೈ: ನಾಲ್ಕು ಮಹಡಿಯ ವಸತಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಕನಿಷ್ಠ 9 ಜನರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಭಿವಂಡಿಯ ಬಾಲಾಜಿ ನಗರ ಗಂಗಾರಾಮ್ವಾಡಿ ಪ್ರದೇಶದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೊಹಿನೂರ್ ಅಪಾರ್ಟ್ಮೆಂಟ್ ಎಂದು ಗುರುತಿಸಲಾದ ಕಟ್ಟಡವು ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು ದಿಢೀರನೆ ಕುಸಿದು ಬಿದ್ದಿದೆ. ಕಟ್ಟಡ ಕುಸಿದ ಬಗ್ಗೆ ಮಾಹಿತಿ ತಿಳಿದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳನ್ನು ತೆರವುಗೊಳಿಸಲು ವಿಶೇಷ ರಕ್ಷಣಾ ತಂಡಗಳ ಜೊತೆಗೆ ಬೃಹತ್ ಯಂತ್ರೋಪಕರಣಗಳನ್ನು ನಿಯೋಜಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ , ಥಾಣೆ ವಿಪತ್ತು ನಿರ್ವಹಣಾ ಪಡೆ ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. - [ಬಿಜೆಪಿ ಮುಖಂಡ ಯೋಗೀಶ ಗೌಡ ಕೊಲೆ ಪ್ರಕರಣ: ಮಾಜಿ ಶಾಸಕ ವಿನಯ ಕುಲಕರ್ಣಿ ಸಹಿತ 10 ಮಂದಿಗೆ ಹೈಕೋರ್ಟ್ ಜಾಮೀನು](https://prathidina.com/?p=79474): ಧಾರವಾಡ: ಬಿಜೆಪಿ ಮುಖಂಡ ಯೊಗೀಶಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ ಕುಲಕರ್ಣಿ ಸೇರಿ 10 ಮಂದಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ಅಮಾನತಿನಲ್ಲಿಟ್ಟು, ಜಾಮೀನು ನೀಡುವಂತೆ ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ, ಚಂದ್ರಶೇಖರ ಇಂಡಿ ಮತ್ತಿತರರು ಸಲ್ಲಿಸಿದ್ದ ಮಧ್ಯಂತರ ಅರ್ಜಿ ಕುರಿತ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಹಾಗೂ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿತು. ಮಧ್ಯಂತರ ಅರ್ಜಿಗಳನ್ನು ಮಾನ್ಯ ಮಾಡಿರುವ ಹೈಕೋರ್ಟ್, ಜನಪ್ರತಿ‌ನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಕೋರಿ ಸಲ್ಲಿಸಲಾಗಿರುವ ಮೇಲ್ಮನವಿಗಳು ಇತ್ಯರ್ಥವಾಗುವವರೆಗೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಅಮಾನತಿನಲ್ಲಿರಿಸಲಾಗಿದ್ದು, ಮೇಲ್ಮನವಿದಾರರನ್ನು ಷರತ್ತುಗಳಿಗೆ ಒಳಪಟ್ಟಂತೆ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ. ಆರೋಪಿಗಳೆಲ್ಲರೂ ತಲಾ 5 ಲಕ್ಷ ರೂ. ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಶ್ಯೂರಿಟಿ ಒದಗಿಸಬೇಕು, ಸಂಪೂರ್ಣ ದಂಡದ ಮೊತ್ತವನ್ನು... - [ಉಡುಪಿ: ರಾಹುಲ್ ಗಾಂಧಿ ವಿರುದ್ಧ ಧ್ವೇಷ ಭಾಷಣ: ರಾವಣನಂತೆ ಬಿಂಬಿಸಿದ ಯಶ್‌ಪಾಲ್ ಕಟೌಟ್‌ಗೆ ಮೊಟ್ಟೆ ಎಸೆತ: ಪ್ರತಿಕೃತಿ ದಹಿಸಿ ಆಕ್ರೋಶ](https://prathidina.com/?p=79472): ಉಡುಪಿ: ರಾಹುಲ್ ಗಾಂಧಿ ವಿರುದ್ಧ ಧ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಯಶ್‌ಪಾಲ್ ಸುವರ್ಣರನ್ನು 10 ತಲೆ ಹಾಗೂ ಎಂಟು ಕೈಗಳ ರಾವಣನಂತೆ ಬಿಂಬಿಸಿದ ಕಟೌಟ್ ಗಮನ ಸೆಳೆಯಿತು. ಚಡ್ಡಿ ಧರಿಸಿರುವ ಯಶ್‌ಪಾಲ್, ಕೈಗಳಲ್ಲಿ ಮದ್ಯದ ಬಾಟಲಿ, ಐಸ್‌ಕ್ಯಾಂಡಿ, ಮೊಬೈಲ್, ಟವಲ್, ಜೋಕರ್ ಇಸ್ಪೀಟ್, ಮೆಲೋಡಿ ಚಾಕಟೇಲ್, ಚೊಂಬುಗಳನ್ನು ಹಿಡಿದುಕೊಂಡಿರುವಂತೆ ಕಟೌಟ್‌ನಲ್ಲಿ ಚಿತ್ರಿಸ ಲಾಗಿದೆ. ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಈ ಕಟೌಟ್‌ಗೆ ಮೊಟ್ಟೆಗಳನ್ನು ಎಸೆದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಯಶ್‌ಪಾಲ್ ವಿರುದ್ಧ ಘೋಷಣೆ ಗಳನ್ನು ಕೂಗುತ್ತ ರಾವಣನಂತೆ ಬಿಂಬಿಸಲಾದ ಯಶ್‌ಪಾಲ್ ಸುವರ್ಣರ ಪ್ರತಿಕೃತಿಯನ್ನು ದಹಿಸಲಾಯಿತು. - [ವಿಟ್ಲ: ಜನಪ್ರಿಯ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ಸ್ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ಕಲರ್ ಪ್ರಿಂಟರ್ ಕೊಡುಗೆ](https://prathidina.com/?p=79470): ವಿಟ್ಲ: ಜನಪ್ರಿಯ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ಸ್ ವತಿಯಿಂದ ವಿಟ್ಲ ಪೊಲೀಸ್ ಠಾಣೆಯ ಆಡಳಿತಾತ್ಮಕ ಕಾರ್ಯಗಳಿಗೆ ನೆರವಾಗುವ ಉದ್ದೇಶದಿಂದ ಕಲರ್ ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಜನಪ್ರಿಯ ಶಾಲೆಯ ನಿರ್ದೇಶಕರಾದ ಶ್ರೀ ನೌಶೀನ್ ಬದ್ರಿಯಾ, ಪ್ರಾಂಶುಪಾಲರಾದ ಶ್ರೀ ಲಿಬಿನ್ ಝೇವಿಯರ್ ಹಾಗೂ ಆಡಳಿತಾಧಿಕಾರಿ ಶ್ರೀ ಸಫ್ವಾನ್ ಪಿಲಿಕಲ್ ಅವರು ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಶ್ರೀ ಪ್ರಕಾಶ್ ದೇವಾಡಿಗ ಅವರನ್ನು ಭೇಟಿಯಾಗಿ ಕಲರ್ ಪ್ರಿಂಟರ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯ ಇತರ ಸಿಬ್ಬಂದಿಯೂ ಉಪಸ್ಥಿತರಿದ್ದರು. ಪ್ರಿಂಟರ್ ಕೊಡುಗೆಯನ್ನು ಸ್ವೀಕರಿಸಿದ ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿ, ಈ ಉಪಯುಕ್ತ ಕೊಡುಗೆಗಾಗಿ ಜನಪ್ರಿಯ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ಸ್ ಚೇರ್ಮನ್ ಡಾ. ಅಬ್ದುಲ್ ಬಶೀರ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.  ಈ ಕಾರ್ಯವು ಪೊಲೀಸ್ ಇಲಾಖೆ ಮತ್ತು  ಸಂಸ್ಥೆಯ ನಡುವಿನ ಉತ್ತಮ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನವಾಗಲಿದೆ ಎಂದು ಹೇಳಿದರು. - [ವಿಟ್ಲ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವೃದ್ಧ ಜೀವನ್ಮರಣ ಸ್ಥಿತಿಯಲ್ಲಿ ತೋಟದ ಚರಂಡಿಯಲ್ಲಿ ಪತ್ತೆ: ವೃದ್ಧನ ಪತ್ತೆಗಾಗಿ ಕಾರ್ಯಾಚರಣೆ ಇಳಿದ ಸಾಮಾಜಿಕ ಮುಖಂಡರು](https://prathidina.com/?p=79468): ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ನಿವಾಸಿ ಗಿರಿಯಪ್ಪ ಸಪಲ್ಯ (75) ಎಂಬವರು ಕಳೆದ ಮೂರು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಇಂದು ಬೆಳಿಗ್ಗೆ ಅಡಿಕೆ ತೋಟದ ಚರಂಡಿಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಮಂಗಳವಾರ ವೃದ್ಧ ಕಾಣೆಯಾಗಿದ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಬಂದು ಕೆರೆ, ಮತ್ತು ಹಳ್ಳಗಳಲ್ಲಿ ಕಾರ್ಯಾಚರಣೆ ನಡೆಸಿದ್ದರು. ಅವರ ಸಂಬಂಧಿಕರು ಮತ್ತು ಕೋಡಪದವು ಮಾರುತಿ ಫ್ರೆಂಡ್ಸ್ , ಸಾರ್ವಜನಿಕರ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ ಹುಟುಕಾಟ ಆರಂಭಿಸಿದ್ದರು. ಕೋಡಪದವು ಮಾರುತಿ ಫ್ರೆಂಡ್ಸ್ ತಂಡದ ಮನೋಹರ, ಜಿಲ್ಲಾ ಬಿಜೆಪಿ ವಕ್ತಾರ ಮಾಧವ ಮಾವೆ, ಮಾಣಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರವಿಂದ ರೈ, ರೈತ ಮೋರ್ಚಾ ಅಧ್ಯಕ್ಷ ಉಮೇಶ್ ಶೆಟ್ಟಿ, ಸೀತಾರಾಮ ಗೌಡ , ಮುರಳಿ ಭಟ್, ಮನೋಹರ ಕುಕ್ಕಿಲ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಬೆಳಿಗ್ಗೆ ಕುಕ್ಕಿಲದ ಅಡಿಕೆ ತೋಟದ ನೀರು ಹರಿಯುವ ಚರಂಡಿಯಲ್ಲಿ ವೃದ್ಧ ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ... - [ಮಂಗಳೂರು: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಆರೋಪಿಯ ಬಂಧನ](https://prathidina.com/?p=79465): ಮಂಗಳೂರು: 2015ರಲ್ಲಿ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಚುಂಕಿ ಆಕಾಶಭವನ @ ಸಂತೋಷ್ ಎಸ್ (34) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2015ರಲ್ಲಿ ಆಕಾಶಭವನದಲ್ಲಿ ನಡೆದ ಮದುವೆಯ ಕಾರ್ಯಕ್ರಮದ ವೇಳೆ ಉಂಟಾದ ಮಾತಿನ ಚಕಮಕಿಯ ಹಿನ್ನೆಲೆಯಲ್ಲಿ, ಆರೋಪಿ ಸಂತೋಷ್ ಹಾಗೂ ಇತರ ಆರೋಪಿಗಳು ಸೇರಿ ಅಶೋಕ ಕುಮಾರ ಕೊಟ್ಟಾರಿ ಅವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 135/2015ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗಿದ ಬಳಿಕ ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ವಿರುದ್ಧ ನ್ಯಾಯಾಲಯ LPC ವಾರಂಟ್ (25/2025) ಹೊರಡಿಸಿತ್ತು. ಸಿಸಿಬಿ ಪೊಲೀಸರು ದೀರ್ಘಕಾಲದ ಮಾಹಿತಿ ಸಂಗ್ರಹದ ಬಳಿಕ ಆರೋಪಿಯು ಶಿವಮೊಗ್ಗ ಭಾಗದಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದು, ಜುಲೈ 29, 2026ರಂದು ಹಾವೇರಿ ಜಿಲ್ಲೆಯ ಚಿಕ್ಕೆರೂರಿನಲ್ಲಿ ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ... - [ಸರಳಿಕಟ್ಟೆ: ಫೊಕ್ಸೋ ಕಾಯಿದೆಯ ಕುರಿತು ಮಕ್ಕಳಿಗೆ ಕಾನೂನು ಅರಿವು ಕಾರ್ಯಕ್ರಮ](https://prathidina.com/?p=79458): ಸರಳಿಕಟ್ಟೆ; ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಮತ್ತು ದ.ಕ.ಜಿ.ಪಂ.ಸ.ಉ.ಹಿ.ಪ್ರಾಥಮಿಕ ಶಾಲೆ, ಸರಳಿಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವು ಸರಳಿಕಟ್ಟೆ ಸರಕಾರಿ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ರಾಮಲಿಂಗಪ್ಪ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು, ಹಾಗೂ ಸದಸ್ಯ ಕಾರ್ಯದರ್ಶಿಗಳು, ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಲೈಂಗಿಕ ದೌರ್ಜನ್ಯಗಳ ವಿರುದ್ಧ ರಕ್ಷಣೆ, ಮಕ್ಕಳಿಗೆ ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ ತಿಳಿಸಿಕೊಟ್ಟರು. ಯಾರಾದರೂ ಅನುಚಿತವಾಗಿ ವರ್ತಿಸಿದರೆ ತಕ್ಷಣ ಶಿಕ್ಷಕರಿಗೆ ಅಥವಾ ಪೋಷಕರಿಗೆ ತಿಳಿಸುವಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ಅಲೋಶಿಯಸ್‍ ಎಸ್. ಲೋಬೋ ಅಧ್ಯಕ್ಷರು ವಕೀಲರ ಸಂಘ, (ರಿ) ಬೆಳ್ತಂಗಡಿ ರವರು ಮುಖ್ಯ ಅತಿಥಿಗಳಾಗಿ ಕಾರ್ಯಕಮದಲ್ಲಿ ಭಾಗವಹಿಸಿ ಮಾಧಕ ವ್ಯಸನ್ಯದಿಂದ ದೂರ ಇರುವಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ಸಂದೇಶ ನೀಡಿದರು. ಪ್ರಶಾಂತ್‍ ಎಂ ಪ್ರಧಾನ ಕಾರ್ಯದರ್ಶಿಗಳು, ವಕೀಲರ ಸಂಘ, (ರಿ) ಬೆಳ್ತಂಗಡಿ ಮುಖ್ಯ ಅತಿಥಿಗಳಾಗಿ ಕಾರ್ಯಕಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಾನೂನು ಸೇವೆಗಳ... - [ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ](https://prathidina.com/?p=79457) - [ಬೆಳ್ತಂಗಡಿ: ಮಾದಕ ದ್ರವ್ಯ ಮಾರಾಟಕ್ಕೆ ಯತ್ನ- ಆರೋಪಿಯ ಬಂಧನ: ದುಬೈಗೆ ತೆರಳಬೇಕಾಗಿದ್ದ ಯುವಕ ಜೈಲುಪಾಲು](https://prathidina.com/?p=79454): ಬೆಳ್ತಂಗಡಿ:  ಬುಧವಾರ ಸಂಜೆ ಉದ್ಯೋಗಕ್ಕಾಗಿ ದುಬೈಗೆ ಹೋಗಲು ಸಿದ್ಧನಾಗಿದ್ದ 21 ವರ್ಷದ ಯುವಕನೊಬ್ಬ ಜೈಲುಪಾಲಾಗಿದ್ದಾನೆ. ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಆತನನ್ನು ಬಂಧಿಸಿ  15.41 ಲಕ್ಷ ರೂ. ಮೌಲ್ಯದ  ಎಂಡಿಎಂಎ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕುವೆಟ್ಟು ಕುವೆಟ್ಟು ಗ್ರಾಮದ ಸುಣ್ಣತ್ ಕೆರೆ ನಿವಾಸಿ ತ್ವಲಹ್ @ ಅನ್ಸಾರ್ (21) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸಬ್ ಇನ್ಸ್‌ಪೆಕ್ಟರ್ ಆನಂದ್ ಎಂ ಮತ್ತು ಅವರ ತಂಡ ಜುಲೈ 29 ರಂದು ರಾತ್ರಿ 8 ಗಂಟೆ ಸುಮಾರಿಗೆ ದಿನನಿತ್ಯದ ಗಸ್ತು ತಿರುಗುತ್ತಿದ್ದಾಗ, ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಖಾಸಗಿ ಕಟ್ಟಡದ ಮುಂದೆ ನಿಲ್ಲಿಸಿದ್ದ ಆಟೋರಿಕ್ಷಾ (ಕೆಎ -18-ಎ -7203) ಬಳಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದನ್ನು ಗಮನಿಸಿದ್ದಾರೆ. ಪೊಲೀಸ್ ವಾಹನವನ್ನು ಗಮನಿಸಿದ ಶಂಕಿತ ವ್ಯಕ್ತಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಆದರೆ ಪೊಲೀಸರು ಆತನನ್ನು ತಡೆದು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ಸಮಯದಲ್ಲಿ, ಕುವೆಟ್ಟು ಗ್ರಾಮದ ಆಲಾದಿಕೊಟ್ಟಿಗೆ ನಿವಾಸಿ ಹಮ್ಜತ್ ಕರಾರ್(31) ಎಂಬಾತನಿಗೆ 20 ಸಾವಿರ... - [ವಿಟ್ಲ: ಪಿ ಎಂ ಶ್ರೀ ಪ್ರೌಢ ಶಾಲಾ ಸಹಶಿಕ್ಷಕಿ ಅಮಾನತು: ವಿವಿಧ ದೂರುಗಳು ಬಂದ ಹಿನ್ನೆಲೆ ಇಲಾಖೆಯ ಉಪನಿರ್ದೇಶಕರಿಂದ ಆದೇಶ](https://prathidina.com/?p=79452): ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯೊಬ್ಬರನ್ನು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಸಹಶಿಕ್ಷಕಿ ಅನ್ನಪೂರ್ಣ ಅಮಾನತಾಗಿದ್ದು, ಇಲಾಖೆಯ ಹಿರಿಯ ಅಧಿಕಾರಿಗಳಿಗೆ, ವಿವಿಧ ದೂರುಗಳು ಹೋದ ಹಿನ್ನಲೆಯಲ್ಲಿ ೮ವಿಷಯ ಉಲ್ಲೇಖಿಸಿ ಅಮಾನತು ಮಾಡಿದ್ದಾರೆ. ಶಿಕ್ಷಣ ಇಲಾಖೆಯ ಆಯುಕ್ತರಿಂದ, ಕಾರ್ಯದರ್ಶಿಗಳಿಂದ ಪತ್ರಗಳು ಬಂದಿದ್ದು, ಈ ವಿಚಾರದಲ್ಲಿ ವಿಚಾರಣೆಗಳು ನಡೆದ ಬಳಿಕ ಈ ಆದೇಶವಾಗಿದೆ ಎಂದು ಹೇಳಲಾಗಿದೆ. - [ಉಡುಪಿ: ಪೊಲೀಸ್ ಇಲಾಖೆ ಕಚೇರಿಯಲ್ಲಿ ಹಣದ ಬೇಡಿಕೆ: ಕಾರ್ಕಳ ಡಿವೈಎಸ್ಪಿ, ಇನ್ಸ್‌ಪೆಕ್ಟರ್, ಸಹಿತ ಮೂವರು ಅಮಾನತು](https://prathidina.com/?p=79450): ಉಡುಪಿ: ಪೊಲೀಸ್‌ ಇಲಾಖೆ ಕಚೇರಿಯಲ್ಲಿ ಹಣದ ಬೇಡಿಕೆ ನಡೆದಿರುವ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಕಾರ್ಕಳ ಡಿವೈಎಸ್‌ಪಿ, ಸರ್ಕಲ್‌ ಇನ್ಸೆಕ್ಟರ್‌ ಹಾಗೂ ಡಿವೈಎಸ್‌ಪಿ ಕಚೇರಿ ಸಿಬ್ಬಂದಿ ಸೇರಿ ಮೂವರನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದು, ವೈರಲ್ ಆಗಿರುವ ವಿಡಿಯೋಗಳು ಹಾಗೂ ಸಾರ್ವಜನಿಕವಾಗಿ ಕೇಳಿಬಂದಿರುವ ಆರೋಪಗಳ ಆಧಾರದ ಮೇಲೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಿಂದ ಪ್ರಾಥಮಿಕ ತನಿಖೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಾಥಮಿಕ ತನಿಖಾ ವರದಿಯಲ್ಲಿ ಕಂಡುಬಂದ ಅಂಶಗಳ ಆಧಾರದ ಮೇಲೆ ಕಾರ್ಕಳ ಉಪ ವಿಭಾಗದ ಡಿವೈಎಸ್‌ಪಿ ವಿಜಯ ಪ್ರಸಾದ್, ಕಾರ್ಕಳ ವೃತ್ತ ನಿರೀಕ್ಷಕ ಸಂದೀಪ್ ಹಾಗೂ ಡಿವೈಎಸ್‌ಪಿ ಕಚೇರಿ ಸಿಬ್ಬಂದಿ ಶಿವಾನಂದ ಅವರನ್ನು ಇಲಾಖಾ ಶಿಸ್ತು ಕ್ರಮ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. - [ಕುಂದಾಪುರ: ವ್ಯಕ್ತಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಬರ್ಬರವಾಗಿ ಹತ್ಯೆ](https://prathidina.com/?p=79448): ಕುಂದಾಪುರ: ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಇಂದು ಬೆಳ್ಳಂ ಬೆಳಗ್ಗೆ ಕುಂದಾಪುರದ ಹೋಲಿ ರೋಸರಿ ಚರ್ಚ್ ಎದುರಿನ ರಸ್ತೆಯಲ್ಲಿ ನಡೆದಿದೆ. ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದವರು. ಘಟನೆ ವಿವರ ಐವನ್ ರಿಚರ್ಡ್ ಮಸ್ಕರೇನಸ್ ಎಂಬುವವರು ತಮ್ಮ ಮೊದಲ ಪತ್ನಿಯಾದ ಸೆಲ್ಮಾ ಮಸ್ಕರೇನಸ್ ಅವರನ್ನು ತೊರೆದು ಬಾರ್ಕೂರು ಮೂಲದ ಮಹಿಳೆಯೊಂದಿಗೆ ಸಂಸಾರ ನಡೆಸುತ್ತಿದ್ದರು. ಇಂದು ಮುಂಜಾನೆ 3.30ರ ಸುಮಾರಿಗೆ ಅದೇ ಮಹಿಳೆಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆಐವನ್ ರಿಚರ್ಡ್ ಮಸ್ಕರೇನಸ್ ಎಂಬುವವರು ತಮ್ಮ ಮೊದಲ ಪತ್ನಿಯಾದ ಸೆಲ್ಮಾ ಮಸ್ಕರೇನಸ್ ಅವರನ್ನು ತೊರೆದು ಬಾರ್ಕೂರು ಮೂಲದ ಮಹಿಳೆಯೊಂದಿಗೆ ಸಂಸಾರ ನಡೆಸುತ್ತಿದ್ದರು. ಇಂದು ಮುಂಜಾನೆ 3.30ರ ಸುಮಾರಿಗೆ ಅದೇ ಮಹಿಳೆಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆ ವ್ಯಕ್ತಿಯೊಬ್ಬ ಅಡ್ಡಗಟ್ಟಿ ಪಿಸ್ತೂಲ್‌ನಲ್ಲಿ ಗುಂಡಿಕ್ಕಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಗಿದ್ದ ಮಹಿಳೆ ಆರೋಪಿಯ ಗುರುತು ಹಚ್ಚಿದ್ದು, ಪರಾರಿಯಾದ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಯಾವ... - [ವಿಟ್ಲ: ಆ. 2ರಂದು ಕೆಲಿಂಜದಲ್ಲಿ  ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ](https://prathidina.com/?p=79446): ವಿಟ್ಲ: ಜೆಸಿಐ ವಿಟ್ಲ,ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಮಂಗಳೂರು, ಮಂಗಳ ಸಮೂಹ ಶಿಕ್ಷಣ ಸಂಸ್ಥೆಗಳು ಮಂಗಳೂರು ಇವರ ಸಹಯೋಗದೊಂದಿಗೆಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವು ನಡೆಯಲಿದೆ. ಸ್ಥಳ : ಶ್ರೀ ನಿಕೇತನ ಮಂದಿರ, ಕೆಲಿಂಜ. ದಿನಾಂಕ: 2-8-2026, ಆದಿತ್ಯವಾರ ಎಲ್ಲಾ ಜೆಸಿ ಸದಸ್ಯರು ಹಾಗೂ ಪೂರ್ವಧ್ಯಕ್ಷರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ವಿಟ್ಲ ಜೆಸಿಐ ಅಧ್ಯಕ್ಷ ಜೆಸಿ ಸಂದೀಪ್ ಅವರು ತಿಳಿಸಿದ್ದಾರೆ. - [ಮಂಗಳೂರು-ಮೂಡುಬಿದಿರೆ ಹೆದ್ದಾರಿಯ ಎಡಪದವು ಬಳಿ ಹೊಸತಾಗಿ ನಿರ್ಮಿಸಿರುವ ಹೆದ್ದಾರಿ ಕುಸಿತ-ಸಂಪರ್ಕ ಕುಸಿತ](https://prathidina.com/?p=79444): ಮಂಗಳೂರು:  ಮಂಗಳೂರು-ಮೂಡುಬಿದಿರೆ ಹೆದ್ದಾರಿಯ ಎಡಪದವು ಬಳಿ ಹೊಸತಾಗಿ ನಿರ್ಮಿಸಿರುವ ಹೆದ್ದಾರಿ ಕಳೆದ ಕೆಲವು ದಿನದ ಮಳೆಯಿಂದಾಗಿ ಭಾಗಶಃ ಕುಸಿತಗೊಂಡಿದೆ. ಅಡಿಕೆ ತೋಟವಿದ್ದ ಜಾಗಕ್ಕೆ 35 ಮೀಟರ್ ಮಣ್ಣು ಸುರಿದು ಮಾಡಿದ್ದ ಹೆದ್ದಾರಿ ಕಳಪೆ ಕಾಮಗಾರಿಯಿಂದ ಕುಸಿದು ಹೋಗಿದೆ. ಇದೇ ವೇಳೆ, ಮಂಗಳೂರಿನಿಂದ ಎಡಪದವು ಪೇಟೆಯ ಮೂಲಕ ಮೂಡುಬಿದಿರೆ ಹೋಗುವ ಪರ್ಯಾಯ ರಸ್ತೆಯ ಮೇಲ್ಬಾಗದ ಗುಡ್ಡವೂ ಕುಸಿಯುವ ಭೀತಿ ಎದುರಾಗಿದ್ದು ಇದರಿಂದಾಗಿ ಮೂಡುಬಿದಿರೆ ಮಂಗಳೂರು ಹೆದ್ದಾರಿಯೇ ಸಂಚಾರ ಸ್ಥಗಿತದ ಆತಂಕದಲ್ಲಿದೆ. ತಿಂಗಳ ಹಿಂದೆಯೇ ಮೊದಲ ಮಳೆಗೆ ಎಡಪದವು ಮುಚ್ಚೂರು ಕ್ರಾಸ್ ಬಲಭಾಗದಲ್ಲಿ ಗುಡ್ಡ ಕುಸಿದು ಆತಂಕಕ್ಕೆ ಕಾರಣವಾಗಿತ್ತು. ಈಗ ಅಲ್ಲಿಯೇ ತುಸು ಮುಂದೆ ಶಿಬಿಕೆರೆ ಭಾಗದಲ್ಲಿ ಎಡಪದವು ಬೈಪಾಸ್ ಮಾಡಲು ನಿರ್ಮಿಸಿರುವ ಚತುಷ್ಪಥ ಹೆದ್ದಾರಿಯು ಭಾಗಶಃ ಕುಸಿತಗೊಂಡಿದ್ದು, ಸಂಚಾರಕ್ಕೆ ತೊಂದರೆಯಾಗಿದೆ. ಕುಲಶೇಖರ-ಸಾಣೂರು ರಾಷ್ಟ್ರೀಯ ಹೆದ್ದಾರಿ 169ರ ಈ ಭಾಗವು ಕೆಲವು ದಿನ ಗಳಿಂದ ತೀವ್ರಗೊಂಡಿರುವ ಮಳೆಯಿಂದಾಗಿ ಅರ್ಧಕ್ಕೆ ಕುಸಿತದಿದೆ. ನೀರು ಹರಿಯುವ ಹಾಗೂ ಅಡಿಕೆ, ತೆಂಗಿನ ತೋಟವಿದ್ದ ಜಾಗಕ್ಕೆ ಇನ್ನೊಂದು ಬದಿಯ ಗುಡ್ಡದಿಂದ ಟನ್... - [ಉಡುಪಿ: ದ್ವೇಷ ಭಾಷಣ: ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಎಫ್ ಐ ಆರ್ ದಾಖಲು](https://prathidina.com/?p=79442): ಉಡುಪಿ: ಜುಲೈ 28 ರಂದು ಉಡುಪಿಯಲ್ಲಿ ನಡೆದ ಕಾಂಗ್ರೆಸ್ ಮತ್ತು ‘ಕಾಕ್ರೋಚ್ ಪಾರ್ಟಿ’ ವಿರುದ್ಧದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಅವರು ಮಾಡಿದ ಭಾಷಣ ವಿವಾದಕ್ಕೆ ಕಾರಣವಾಗಿದೆ. ಪ್ರತಿಭಟನೆಯ ಸಂದರ್ಭದಲ್ಲಿ, “ಬಾಬರಿ ಮಸೀದಿಯನ್ನು ಕೆಡವಿದಂತೆಯೇ, ರಾಹುಲ್ ಗಾಂಧಿಯವರ ರಾಜವಂಶವೂ ನಾಶವಾಗುತ್ತದೆ” ಎಂದು ಶಾಸಕರು ಹೇಳಿಕೆ ನೀಡಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಕಾಂಗ್ರೆಸ್ ನಾಯಕರು ನೀಡಿದ ದೂರಿನ ಮೇರೆಗೆ, ಪೊಲೀಸರು ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಜುಲೈ 29 ರ ಬುಧವಾರ ಸಂಜೆ, ಉಡುಪಿ ಪೊಲೀಸ್ ಠಾಣೆಯ ತನಿಖಾಧಿಕಾರಿ ಸುವರ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ನೋಟಿಸ್ ನೀಡಿದ್ದಾರೆ. ನೋಟಿಸ್‌ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಮಾದಕ ವಸ್ತುಗಳ ಪ್ರಭಾವದಲ್ಲಿದ್ದಾರೆ ಮತ್ತು ಅವರ ಕುಟುಂಬದ ವಂಶಾವಳಿ ನಾಶವಾಗುತ್ತದೆ ಎಂದು ಶಾಸಕರು ಹೇಳಿಕೊಂಡಿದ್ದರು. ಪೊಲೀಸರು ಈ ಹೇಳಿಕೆಗಳನ್ನು ದ್ವೇಷ ಭಾಷಣ ಎಂದು ಪರಿಗಣಿಸಿ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. - [ಗುಜರಾತ್ ಏರ್ ಇಂಡಿಯಾ ದುರಂತ: ಇಂಧನ ಸ್ವಿಚ್‌ನಲ್ಲಿ ಯಾವುದೇ ದೋಷವಿಲ್ಲ: ಕೇಂದ್ರ ಸ್ಪಷ್ಟನೆ](https://prathidina.com/?p=79439): ನವದೆಹಲಿ: ಕಳೆದ ವರ್ಷ 260 ಜನರ ಸಾವಿಗೆ ಕಾರಣವಾಗಿದ್ದ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ AI-171 ವಿಮಾನ ಅಪಘಾತದ ತನಿಖೆ ಅಂತಿಮ ಹಂತ ತಲುಪಿದ್ದು, ವಿಮಾನದ ‘ಫ್ಯೂಯಲ್ ಕಂಟ್ರೋಲ್ ಸ್ವಿಚ್’ (ಇಂಧನ ನಿಯಂತ್ರಣ ಸ್ವಿಚ್) ಲಾಕಿಂಗ್ ವ್ಯವಸ್ಥೆಯಲ್ಲಿ ಯಾವುದೇ ತಾಂತ್ರಿಕ ದೋಷ ಕಂಡುಬಂದಿಲ್ಲ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಸಂಸತ್ತಿನ ಮಳೆಗಾಲ ಅಧಿವೇಶನದಲ್ಲಿ ಕೇಳಲಾದ ಪ್ರಶ್ನೆಗಳಿಗೆ ಲಿಖಿತ ಉತ್ತರ ನೀಡಿದ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ ಮೊಹೋಲ್ ಅವರು, ಅಮೆರಿಕದ ಸಿಯಾಟಲ್‌ನಲ್ಲಿರುವ ಬೋಯಿಂಗ್ ಸಂಸ್ಥೆಯ (OEM) ತಜ್ಞರ ಸಮ್ಮುಖದಲ್ಲಿ ಇಂಧನ ನಿಯಂತ್ರಣ ಸ್ವಿಚ್ ಅನ್ನು ಸುಧಾರಿತ ಪರೀಕ್ಷೆಗೊಳಪಡಿಸಲಾಗಿದ್ದು, ಯಾವುದೇ ನ್ಯೂನತೆ ಪತ್ತೆಯಾಗಿಲ್ಲ ಎಂದು ತಿಳಿಸಿದರು. ಇನ್ನೊಂದೆಡೆ, ವಿಮಾನದ ಸಂಪೂರ್ಣ ಥ್ರಸ್ಟ್ ಕಂಟ್ರೋಲ್ ಮಾಡ್ಯೂಲ್ (Thrust Control Module) ಕುರಿತು ಅಮೆರಿಕದ ಸಿಯಾಟಲ್‌ನಲ್ಲಿರುವ OEM ಕೇಂದ್ರದಲ್ಲಿ ಇನ್ನೂ ಪರಿಶೀಲನೆ ಮುಂದುವರಿದಿದ್ದು, ಅದರ ವರದಿಗಾಗಿ ತನಿಖಾಧಿಕಾರಿಗಳು ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ. ಅಪಘಾತದ ಅಂತಿಮ ತನಿಖಾ ವರದಿ ವಿಳಂಬವಾಗಿದೆ ಎಂಬ ಆರೋಪಗಳನ್ನು... - [ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಹೊರಗೆ: ಚುನಾವಣಾ ಆಯೋಗ](https://prathidina.com/?p=79437): ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಪ್ರಸ್ತುತ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಗುರುತಿಸಲಾಗಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಸವಿಸ್ತಾರವಾದ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರತಿಯೊಬ್ಬ ಮತದಾರರ ಮನೆ ಬಾಗಿಲಿಗೆ ತೆರಳಿ ಸ್ಥಳ ಮಹಜರು ಮಾಡಲಾಗಿದ್ದು, ಮೃತರ ಡೆತ್ ಸರ್ಟಿಫಿಕೇಟ್ ಸಂಗ್ರಹಿಸುವುದರ ಜೊತೆಗೆ ಸಂಬಂಧಪಟ್ಟವರಿಂದ ಸಹಿ ಕೂಡ ಪಡೆಯಲಾಗಿದೆ. ಹೀಗಾಗಿ ಈ 84 ಲಕ್ಷಕ್ಕೂ ಅಧಿಕ ಜನರನ್ನು ಮೊದಲ ಕರಡು ಪಟ್ಟಿಯಲ್ಲಿ ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. - [ಧರ್ಮಸ್ಥಳ: ಅಸ್ಥಿಪಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ದೃಢಪಟ್ಟ ಮೂವರ ಗುರುತು](https://prathidina.com/?p=79435): ಧರ್ಮಸ್ಥಳ: ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಅಸ್ಥಿಪಂಜರಗಳಲ್ಲಿ ಒಟ್ಟು ಮೂರು ವ್ಯಕ್ತಿಗಳ ಗುರುತನ್ನು ಕುಟುಂಬದ ಡಿಎನ್‌ಎ ಮೂಲಕ ಎಫ್‌ಎಸ್‌ಎಲ್ ದೃಢಪಡಿಸಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಂಗ್ಲೆಗುಡ್ಡೆಯಲ್ಲಿ ಸೌಜನ್ಯಳ ಮಾವ ವಿಠಲ ಗೌಡ ತೋರಿಸಿದ ಜಾಗದಲ್ಲಿ ಎಸ್‌ಐಟಿ ಅಧಿಕಾರಿಗಳು 2025 ಸೆ.17 ಮತ್ತು 18 ರಂದು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆ ಹಚ್ಚಲಾಗಿದ್ದ ಏಳು ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್ಗೆ ಕಳುಹಿಸಲಾಗಿತ್ತು. ಅಸ್ಥಿಪಂಜರ ಪತ್ತೆಯಾದ ಜಾಗದಲ್ಲಿ ಕೆಲವೊಂದು ಐಡಿ ಕಾರ್ಡ್ಗಳು ಕೂಡ ಪತ್ತೆಯಾಗಿತ್ತು. ಅದರ ಆಧಾರದಲ್ಲಿ ಕುಟುಂಬದವರನ್ನು ಹುಡುಕಾಟ ನಡೆಸಿ ಕುಟುಂಬದವರ ಡಿಎನ್‌ಎ ಪರೀಕ್ಷೆಯನ್ನು ಬೆಳ್ತಂಗಡಿ ನ್ಯಾಯಾಲಯದಲ್ಲಿ ಮಾಡಿ ಎಫ್‌ಎಸ್‌ಎಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಇದರ ವರದಿಯಲ್ಲಿ ಮೂವರ ಕುಟುಂಬದ ಡಿಎನ್‌ಎ ಅಸ್ಥಿಪಂಜರಕ್ಕೆ ತಾಳೆಯಾಗಿರುವುದು ವರದಿಯಿಂದ ಖಚಿತವಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಯು.ಬಿ. ಅಯ್ಯಪ್ಪ (70), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಆದಿಶೇಷ ನಾರಾಯಣ (27), ಕೋಲಾರ ಜಿಲ್ಲೆಯ... - [ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ](https://prathidina.com/?p=79434) - [ಲಾವಣ್ಯ ಹತ್ಯೆ ಪ್ರಕರಣ-ಉಪ್ಪಿನಂಗಡಿಯಿಂದ ಕತ್ತಿ ಖರೀದಿಸಿದ್ದ ಆರೋಪಿ: ಕತ್ತಿ ಖರೀದಿಸಿದ್ದ ಅಂಗಡಿಯಲ್ಲಿ ಮಹಜರು ನಡೆಸಿದ ಪೊಲೀಸರು](https://prathidina.com/?p=79432): ಉಪ್ಪಿನಂಗಡಿ: ಜುಲೈ 16 ರಂದು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಹತ್ಯೆ ಮಾಡಿದ್ದ ಆರೋಪಿಯು ಕೊಲೆಗೆ ಬಳಸಿದ್ದ ಮಾರಾಕಾಸ್ತ್ರವನ್ನು ಉಪ್ಪಿನಂಗಡಿಯಲ್ಲಿ ಖರೀದಿಸಿದ್ದ, ಈ ಹಿನ್ನೆಲೆ ಉಪ್ಪಿನಂಗಡಿಯಲ್ಲಿ ಬುಧವಾರದಂದು ಮಹಜರು ಪ್ರಕ್ರಿಯೆಯನ್ನು ನಡೆಸಲಾಯಿತು. ಲಾವಣ್ಯಳನ್ನು ಕೊಲೆಗೈಯುವ ಬಗ್ಗೆ ಪೂರ್ವ ಯೋಜನೆಯನ್ನು ರೂಪಿಸಿದ್ದ ಎನ್ನಲಾಗಿದ್ದು, ಪೂರಕವಾಗಿ ಜುಲೈ 15 ರಂದೇ ಉಪ್ಪಿನಂಗಡಿಗೆ ಆಗಮಿಸಿ ಅಲ್ಲಿ ಕೃಷಿ ಸಲಕರಣೆಗಳ ಮಾರಾಟ ಮಳಿಗೆಗೆ ಭೇಟಿ ನೀಡಿದ್ದ. ಅಲ್ಲಿ ಕೃಷಿಕರು ಬಳಕೆಗೆ ಬೇಕಾಗುವ ಉದ್ದನೆಯ ಕತ್ತಿಯನ್ನು ಪರಿಶೀಲಿಸಿ ಅದರ ಬೆಲೆಯನ್ನು ಕೇಳಿದ್ದ. ಬಳಿಕ ಅಲ್ಲಿದ ಹೋರ ಹೋಗಿ ಬೇರೆಲ್ಲೋ ವಿಚಾರಿಸಲು ಯತ್ನಿಸಿ ಮರಳಿ ಅದೇ ಮಳಿಗೆಗೆ ಬಂದು ಕತ್ತಿಯನ್ನು ಖರೀದಿಸಿದ್ದ. ಕಾಗದದಿಂದ ಸುತ್ತುವರೆದು ಪ್ಯಾಕ್ ಮಾಡಲಾದ ಕತ್ತಿಯನ್ನು ಅಲ್ಲೇ ಸ್ವಲ್ಪ ಹೊತ್ತು ಇರಿಸಿ ಹೊರ ಹೋದಾತ ಬಳಿಕ ಬಂದು ಕತ್ತಿಯನ್ನು ಪಡೆದುಕೊಂಡು ಹೋಗಿರುವ ದೃಶ್ಯಾವಳಿಗಳು ಸಿಸಿ ಕ್ಯಾಮಾರದ ಸಂಗ್ರಹದಲ್ಲಿ ಗೋಚರಿಸಿದೆ. ಈ ಬಗ್ಗೆ ತನಿಖಾಧಿಕಾರಿಗಳು ಆರೋಪಿ ಚೇತನ್ ನ ಮುಖವನ್ನು ಕಪ್ಪು ಬಟ್ಟೆಯಿಂದ ಮರೆಮಾಚಿ ಸ್ಥಳಕ್ಕೆ ಕರೆ... - [ಪುತ್ತೂರು: ರಸ್ತೆ ದುರಸ್ತಿಗೆ ಆಗ್ರಹಿಸಿ ಸಾರ್ವಜನಿಕ ರಸ್ತೆ ತಡೆದ ಆರೋಪ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು](https://prathidina.com/?p=79430): ಪುತ್ತೂರು: ನರಿಮೊಗರು ಗ್ರಾಮದ ಪುರುಷರಕಟ್ಟೆ–ಶಾಂತಿಗೋಡು ಆನಡ್ಕ ಸಂಪರ್ಕ ರಸ್ತೆಯ ಮಾಯಂಗಳ ಎಂಬಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಸಾರ್ವಜನಿಕ ರಸ್ತೆ ತಡೆ ನಡೆಸಿದ ಆರೋಪದಡಿ ಹಲವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 27ರಂದು ಬೆಳಿಗ್ಗೆ ಕೆಲವರು ಗುಂಪು ಸೇರಿ ರಸ್ತೆ ತಡೆ ನಡೆಸಿ ವಾಹನ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುರೇಶ್ ಸಿ.ಟಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಅರುಣ್ ಕುಮಾರ್ ಪುತ್ತಿಲ, ಮನೀಶ್ ಕುಲಾಲ್, ಅವಿನಾಶ್ ಜೋಗಿ, ಪ್ರೇಮರಾಜ್, ಪ್ರತೀಕ್ ಪುತ್ತಿಲ, ಶ್ರೀರಾಂ ಪಾತಾಳ, ಉಮೇಶ್ ಕೊಡಿಬೈಲು, ಅನಿಲ್ ತೆಂಕಿಲ, ರವಿಕುಮಾರ್ ರೈ, ಜಗದೀಶ್ ರೈ, ಪ್ರಶಾಂತ್ ನೆಕ್ಕಿಲಾಡಿ ಸೇರಿದಂತೆ ಸುಮಾರು 25 ರಿಂದ 30 ಮಂದಿ ಯಾವುದೇ ಪೂರ್ವಾನುಮತಿ ಪಡೆಯದೇ ರಸ್ತೆ ತಡೆ ನಡೆಸಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ... - [ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರು ಮೃತ್ಯು](https://prathidina.com/?p=79428): ಮಡಿಕೇರಿ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೃಹತ್ ಮರ ಬಿದ್ದ ಪರಿಣಾಮ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ನಡೆದಿದೆ. ಬಿಳಿಗೇರಿ ಗ್ರಾಮದ ಟಾಟಾ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ. ದಿನನಿತ್ಯದ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರ ಮೇಲೆ ಏಕಾಏಕಿ ಬೃಹತ್ ಮರ ಉರುಳಿ ಬಿದ್ದಿದೆ. ಪರಿಣಾಮ ಅಸ್ಸಾಂ ಮೂಲದ ಪರ್ಬಿನಾ ಖಾತುನ್ (29) ಹಾಗೂ ಅಲೆಮನ್ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರೊಂದಿಗೆ ಕೆಲಸ ಮಾಡುತ್ತಿದ್ದ ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೋಮವಾರಪೇಟೆ ಪೊಲೀಸರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. - [ಮಂಗಳೂರು: ಕಮಿಷನರ್ ವ್ಯಾಪ್ತಿಯಲ್ಲಿ ಪತ್ತೆ ಹಚ್ಚಲಾಗಿದ್ದ  82ಕೋಟಿ ಮೌಲ್ಯದ ಭಾರೀ ಪ್ರಮಾಣದ ಮಾದಕ ವಸ್ತುಗಳ ನಾಶಪಡಿಸಿದ ಪೊಲೀಸರು](https://prathidina.com/?p=79426): ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಠಾಣೆಗಳಲ್ಲಿ ಜಪ್ತಿ ಮಾಡಲಾಗಿದ್ದ ಸುಮಾರು ರೂ. 82 ಕೋಟಿ ಮೌಲ್ಯದ ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು ಬುಧವಾರ ಮುಲ್ಕಿಯ ಕೊಲ್ನಾಡು ಇಂಡಸ್ಟ್ರಿಯಲ್ ಪ್ರದೇಶದಲ್ಲಿ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ಸುಟ್ಟು ನಾಶಪಡಿಸಲಾಯಿತು. ನ್ಯಾಯಾಲಯದ ಅನುಮತಿಯೊಂದಿಗೆ 59 ಎನ್‌ಡಿಪಿಎಸ್‌ ಪ್ರಕರಣಗಳಿಗೆ ಸೇರಿದ 450 ಕೆಜಿ ಗಾಂಜಾ ಹಾಗೂ 75 ಕೋಟಿ ರೂ. ಮೌಲ್ಯದ 37 ಕೆಜಿ ಎಂಡಿಎಂಎ ಸೇರಿ ಒಟ್ಟು 43.26 ಕೆಜಿ ಎಂಡಿಎಂಎ ಮತ್ತಿತರ ಡ್ರಗ್ಸ್ ಅನ್ನು ‘ಡ್ರಗ್ ಡಿಸ್ಪೋಸಲ್ ಕಮಿಟಿ’ ಸಮ್ಮುಖದಲ್ಲಿ ವಿಲೇವಾರಿ ಮಾಡಲಾಗಿದೆ. 2026ರಲ್ಲಿ ಇದುವರೆಗೆ ನಗರದಲ್ಲಿ 87 ಪ್ರಕರಣಗಳಲ್ಲಿ 157 ಪೆಡ್ಲರ್‌ಗಳನ್ನು ಬಂಧಿಸಲಾಗಿದ್ದು, ಸಾರ್ವಜನಿಕರು ಡ್ರಗ್ಸ್ ಕುರಿತು ಮಾಹಿತಿ ನೀಡಲು 112 ಅಥವಾ ಕ್ಯೂಆರ್ ಕೋಡ್ ಬಳಸುವಂತೆ ಕಮಿಷನರ್ ಕೋರಿದ್ದಾರೆ. ಇನ್ನು 2026ನೇ ಸಾಲಿನಲ್ಲಿ ಇದುವರೆಗೆ 87 ಎನ್‌ಡಿಪಿಎಸ್‌ ಪ್ರಕರಣಗಳನ್ನು ದಾಖಲಿಸಿ 157 ಪೆಡ್ಲರ್ ಆರೋಪಿಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಗಳಲ್ಲಿ 8,18,30,130 ರೂ. ಮೌಲ್ಯದ 148 ಕೆ.ಜಿ. 615... - [ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು](https://prathidina.com/?p=79423): ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಶ್‌ಪಾಲ್ ಸುವರ್ಣ, ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ತೆರಳಿದ ಕಾಂಗ್ರೆಸ್ ಮುಖಂಡರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರಿಗೆ ದೂರು ಸಲ್ಲಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನಂತೆ ಶಾಸಕ ಯಶ್‌ಪಾಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 57, 192, 196(2), 352, 353(2) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ... - [ಬಂಟ್ವಾಳ: ವೃದ್ಧೆಯನ್ನು ಕೊಲೆಗೈದು ಚಿನ್ನಾಭರಣ ದೋಚಿದ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ](https://prathidina.com/?p=79422): ಬಂಟ್ವಾಳ: ವೃದ್ಧೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆಗೈದು ಚಿನ್ನಾಭರಣ ದೋಚಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬಂಟ್ವಾಳ ಅಮ್ಮುಂಜೆ ನಿವಾಸಿ ಬೆನಡಿಕ್ಟ್ ಕಾರ್ಲೋ (73) ಅವರ ಆರೈಕೆ ನೋಡಿಕೊಳ್ಳುತ್ತಿದ್ದ ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23) ಚಿನ್ನಾಭರಣ ದೋಚುವ ಉದ್ದೇಶದಿಂದ ತನ್ನ ಸ್ನೇಹಿತ ಸತೀಶ ನಾಯಕ್ (28)ನೊಂದಿಗೆ ಸೇರಿ ವೃದ್ಧೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿದ್ದಳು. ಆ ಯತ್ನ ವಿಫಲವಾದ ಬಳಿಕ ಚರಣ್ ಕುಮಾರ್ (31)ನ ಸಹಾಯದಿಂದ 2021ರ ಜನವರಿ 25ರಂದು ರಾತ್ರಿ ಬೆನಡಿಕ್ಟ್ ಕಾರ್ಲೋ ಅವರನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದರು. ಬಳಿಕ ಮೃತೆಯ ಬಳಿ ಇದ್ದ 61.070 ಗ್ರಾಂ ತೂಕದ, ಅಂದಿನ ಸುಮಾರು ₹3 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ದೋಚಿ, ಪ್ರಕರಣದ ಸಾಕ್ಷ್ಯ ನಾಶಪಡಿಸಿದ್ದಾಗಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ, ದರೋಡೆ, ಸಂಚು ಹಾಗೂ ಸಾಕ್ಷ್ಯ ನಾಶ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು... - [ಕಾಸರಗೋಡು: ಎಚ್1ಎನ್1 ಜ್ವರದಿಂದ ಮಂಗಳೂರು ಆಸ್ಪತ್ರೆಯಲ್ಲಿ ಮಹಿಳೆ ಮೃತ್ಯು](https://prathidina.com/?p=79420): ಕಾಸರಗೋಡು: ಜಿಲ್ಲೆಯಲ್ಲಿ ಎಚ್1ಎನ್‌1 ವೈರಸ್ ಸೋಂಕಿನ ಆತಂಕ ಹೆಚ್ಚಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಅಜನೂರು ಮಾಣಿಕೊಟ್ಟೆಯ ನಿವಾಸಿ ಯಶೋದಾ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಅವರಿಗೆ ತೀವ್ರ ಜ್ವರ ಹಾಗೂ ಕೆಮ್ಮಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ, ಎಚ್1ಎನ್‌1 ಸೋಂಕಿನ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮಂಗಳೂರಿನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಯಶೋದಾ ಮೃತಪಟ್ಟಿದ್ದಾರೆ. ಈ ನಡುವೆ, ಯಶೋದಾ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು ಏಳು ಮಂದಿಯಲ್ಲಿ ಜ್ವರ ಹಾಗೂ ಕೆಮ್ಮಿನ ಲಕ್ಷಣಗಳು ಕಂಡುಬಂದಿವೆ. ಆರೋಗ್ಯ ಇಲಾಖೆ ತಕ್ಷಣವೇ ಅವರ ಗಂಟಲ ದ್ರವದ ಮಾದರಿಗಳನ್ನು ಸಂಗ್ರಹಿಸಿ, ಸೋಂಕು ದೃಢಪಡಿಸಲು ಪ್ರಯೋಗಾಲಯಕ್ಕೆ ಕಳುಹಿಸಿದೆ. ಘಟನೆಯ ಹಿನ್ನೆಲೆಯಲ್ಲಿ... - [ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ](https://prathidina.com/?p=79418) - [ಬೆಂಗಳೂರಲ್ಲಿ ಕ್ಯಾಬ್ ಕಾಯುತ್ತಿದ್ದ ಯುವತಿಗೆ 'ನಿನ್ ರೇಟ್ ಎಷ್ಟು' ಅಂತ ಕಿರುಕುಳ ನೀಡಿದ ಬೈಕ್ ಸವಾರ ಬಂಧನ](https://prathidina.com/?p=79415): ಬೆಂಗಳೂರು: ನಗರದ ರಸ್ತೆ ಬದಿಯಲ್ಲಿ ಒಂಟಿಯಾಗಿ ನಿಂತಿದ್ದ ಯುವತಿಗೆ ಅಸಭ್ಯವಾಗಿ ಮಾತನಾಡಿಸಿ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಯೊಬ್ಬನನ್ನು ರಾಮಮೂರ್ತಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿನಗರದ ಎನ್‌ಆರ್‌ಐ ಲೇಔಟ್‌ನ ನಿವಾಸಿಯಾಗಿರುವ, ಹಣ್ಣಿನ ವ್ಯಾಪಾರ ಮಾಡುವ ವಿಜಯರಾಘವ್ (42) ಬಂಧಿತ ಆರೋಪಿ. ಕಳೆದ ದಿನ 26 ವರ್ಷದ ಯುವತಿಯೊಬ್ಬರು ರಸ್ತೆಯಲ್ಲಿ ಕ್ಯಾಬ್ ಬರುವಿಕೆಗಾಗಿ ಕಾಯುತ್ತಿದ್ದರು. ಈ ವೇಳೆ ಸ್ಕೂಟರ್‌ನಲ್ಲಿ ಬಂದ ವಿಜಯರಾಘವ್, ಯುವತಿಯ ಬಳಿ ವಾಹನ ತಡೆದು ಅತ್ಯಂತ ಕೆಟ್ಟ ರೀತಿಯಲ್ಲಿ ಬೆಲೆ ಕೇಳಿ (ರೇಟ್ ಎಷ್ಟು?) ಲೈಂಗಿಕವಾಗಿ ನಿಂದಿಸಿದ್ದಾನೆ. ಧೈರ್ಯಗೆಡದ ಯುವತಿ ತಕ್ಷಣವೇ ತಮ್ಮ ಮೊಬೈಲ್ ಫೋನ್ ತೆಗೆದು ಆತನ ಚರ್ಯೆಯನ್ನು ವೀಡಿಯೋ ಮಾಡಲು ಮುಂದಾಗಿದ್ದಾರೆ. ಪೊಲೀಸರಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದರೂ ಲೆಕ್ಕಿಸದ ಆರೋಪಿ, ಅವಾಚ್ಯ ಶಬ್ದಗಳಿಂದ ನಿಂದಿಸುವುದನ್ನು ಮುಂದುವರಿಸಿದ್ದಾನೆ. ಆದರೆ, ತನ್ನ ಮುಖ ಹಾಗೂ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ವೀಡಿಯೋದಲ್ಲಿ ಸಸ್ಪಷ್ಟವಾಗಿ ಸೆರೆಯಾಗುತ್ತಿರುವುದನ್ನು ಗಮನಿಸುತ್ತಿದ್ದಂತೆ ಅಲ್ಲಿಂದ ಕಾಲ್ಕಿತ್ತಿದ್ದಾನೆ. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ... - [ರಾಯಚೂರು: ಶಿಕ್ಷೆಗೆ ಗುರಿಯಾಗಿದ್ದ ಖೈದಿ ಆಸ್ಪತ್ರೆಯಲ್ಲಿ ಆತ್ಮಹತ್ಯೆ](https://prathidina.com/?p=79414): ರಾಯಚೂರು: ರಾಯಚೂರಿನ ರಿಮ್ಸ್ ಆಸ್ಪತ್ರೆಯ ಖೈದಿಗಳ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷೆಗೆ ಗುರಿಯಾಗಿದ್ದ ಖೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಲಿಂಗಸುಗೂರು ತಾಲೂಕಿನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಶಿಕ್ಷೆಗೆ ಗುರಿಯಾಗಿದ್ದ ಹುಬ್ಬಳ್ಳಿ ಮೂಲದ 32 ವರ್ಷದ ಪವನ್ ಕುಮಾರ್ ಮೃತ ವ್ಯಕ್ತಿ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಜುಲೈ 22ರಂದು ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪವನ್ ಕುಮಾರ್‌ಗೆ ಟಿಬಿ ಹಾಗೂ ಅನ್ನನಾಳದಲ್ಲಿ ರಕ್ತಸ್ರಾವದ ಸಮಸ್ಯೆ ಇದ್ದು, ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಮಂಗಳವಾರ ಖೈದಿಗಳ ವಾರ್ಡ್‌ನ ಶೌಚಾಲಯಕ್ಕೆ ತೆರಳಿದ್ದ ಪವನ್ ಕುಮಾರ್ ಬಹಳ ಹೊತ್ತಾದರೂ ಹೊರಬರದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಅನುಮಾನ ಮೂಡಿದೆ. ಬಳಿಕ ಶೌಚಾಲಯವನ್ನು ಪರಿಶೀಲಿಸಿದಾಗ ಆತ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣವು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ... - [ಫೇಸ್‌ ಬುಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ನಿರ್ಬಂಧ: ಕ್ಷಮೆಯಾಚಿಸಿದ Meta](https://prathidina.com/?p=79412): ನವದೆಹಲಿ: ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ತಾತ್ಕಾಲಿಕವಾಗಿ ನಿರ್ಬಂಧಿಸಿದ ಘಟನೆಗೆ ಸಂಬಂಧಿಸಿದಂತೆ ಮೆಟಾ ಸರ್ಕಾರದ ಕ್ಷಮೆಯಾಚಿಸಿದೆ, ತಾಂತ್ರಿಕ ದೋಷದಿಂದಾಗಿ ಈ ವೀಡಿಯೊ ತೆಗೆದುಹಾಕಲಾಗಿದೆ ಎಂದು ಕಂಪನಿ ಹೇಳಿದೆ ಎಂದು ಮೂಲಗಳು ತಿಳಿಸಿವೆ. ತಾಂತ್ರಿಕ ದೋಷದಿಂದಾಗಿ ಫೇಸ್‌ ಬುಕ್‌ ನಿಂದ ಪ್ರಧಾನಿ ಮೋದಿ ಅವರ ವಿಡಿಯೋವನ್ನು ತೆಗೆದುಹಾಕಲಾಗಿದ್ದು, ಅದನ್ನು ಮರು ಸ್ಥಾಪಿಸಲಾಗಿದೆ ಎಂದು ಮೆಟಾ ವಕ್ತಾರ ಬಿಡುಗಡೆ ಮಾಡಿರುವ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಫೇಸ್‌ ಬುಕ್‌ ನಲ್ಲಿ ಹಂಚಿಕೊಂಡಿದ್ದ ವಿಡಿಯೋವನ್ನು ದಿಢಿರನೆ ತೆಗೆದುಹಾಕಲಾಗಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮೆಟಾದ ವಿವರಣೆ ಮತ್ತು ವಿಡಿಯೋವನ್ನು ತೆಗೆದುಹಾಕಲು ಏನು ಕಾರಣ ಎಂಬ ಅಂಶದ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ. ಫೇಸ್‌ ಬುಕ್‌ ನಿಂದ ವಿಡಿಯೋವನ್ನು ತೆಗೆದುಹಾಕಿರುವ ಕುರಿತು ಮೆಟಾ ಅಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಪ್ರತಿನಿಧಿಗಳಿಗೆ ವಿವರಣೆ ನೀಡುವಂತೆ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ವರದಿ ವಿವರಿಸಿದೆ. ಕಾಕ್ರೋಚ್‌ ಜನತಾ ಪಾರ್ಟಿ(ಸಿಜೆಪಿ) ಕರೆ ನೀಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ... - [Gen Z ಪ್ರತಿಭಟನಾಕಾರರ ವಿರುದ್ಧ ಕಂಗನಾ ರಣಾವತ್ ವಿವಾದಾತ್ಮಕ ಹೇಳಿಕೆ: ವ್ಯಾಪಕ ಆಕ್ರೋಶ](https://prathidina.com/?p=79410): ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ನಗರಗಳಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿ ಪ್ರತಿಭಟನೆಗಳ ವೇಳೆ ಪ್ರತಿಭಟನಾಕಾರರು ಬಳಸಿದ ಭಾಷೆ, ಪೋಸ್ಟರ್ ಹಾಗೂ ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳ ಕುರಿತು ದೇಶಾದ್ಯಂತ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ನೀಡಿರುವ ಹೇಳಿಕೆ ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ‘ಜೆನ್ ಜೀ’ (Gen Z) ಯುವಜನತೆಯನ್ನು ಗುರಿಯಾಗಿಸಿಕೊಂಡು ಕಂಗನಾ ಅವರು ಆಡಿದ ಆಕ್ಷೇಪಾರ್ಹ ಮಾತುಗಳು ಈಗ ತೀವ್ರ ಆಕ್ರೋಶಕ್ಕೆ ಗುರಿಯಾಗಿವೆ. ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಕಂಗನಾ ರಣಾವತ್, ಪ್ರತಿಭಟನೆಯ ವೇಳೆ ಯುವಕ-ಯುವತಿಯರು ಬಳಸಿದ ಭಾಷೆ ಹಾಗೂ ಹಂಚಿಕೊಂಡ ರೀಲ್ಸ್‌ಗಳು ವಾಂತಿ ತರಿಸುವಂತಿವೆ ಎಂದು ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಜೀವನದಲ್ಲೇ ಒಂದೇ ಕಡೆ ಇಷ್ಟೊಂದು ವಿಕೃತ ಮತ್ತು ಅಸಭ್ಯ ವಾತಾವರಣವನ್ನು ಎಲ್ಲೂ ನೋಡಿರಲಿಲ್ಲ ಎಂದಿರುವ ಅವರು, ಪ್ರತಿಭಟನಾಕಾರರು ಮಾತನಾಡುತ್ತಿರುವ ರೀತಿ ಹಾಗೂ ಬಳಸುತ್ತಿರುವ ಶಬ್ದಗಳು ತೀರಾ ಕೀಳುಮಟ್ಟದ್ದಾಗಿವೆ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ಪ್ರತಿಭಟನಾಕಾರರ... - [ಮಂಗಳೂರು: 2014ರ ಗಂಗಾಧರ ಪಾಂಗಳ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ](https://prathidina.com/?p=79408): ಮಂಗಳೂರು: 2014 ರಲ್ಲಿ ನಡೆದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮೊಗವೀರ ಸಮುದಾಯದ ಮುಖಂಡ ಗಂಗಾಧರ ಪಾಂಗಳ ಅವರ ಹತ್ಯೆಗೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ . ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸತೀಶ್‌ ಬೈಕಂಪಾಡಿ(58), ಹರೀಶ್‌ ಬೈಕಂಪಾಡಿ(60) ಭಾಸ್ಕರ್‌ ಬೈಕಂಪಾಡಿ(61) ಪುಪ್ಪರಾಜ್‌ (47) ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು. ಗಂಗಾಧರ ಪಾಂಗಳರವರ ಕೊಲೆ ಪ್ರಕರಣದ 1 ನೇ ಆರೋಪಿ ಸತೀಶ್ ಬೈಕಂಪಾಡಿ ಎಂಬಾತನನ್ನು ಬೈಕಂಪಾಡಿ ಮೊಗವೀರ ಮಹಾಸಭಾದ ಸದಸ್ಯತ್ವದಿಂದ ಅಮಾನತುಪಡಿಸಲು ಮೃತ ಗಂಗಾಧರ ಪಾಂಗಾಳರವರೇ ಮೂಲ ಕಾರಣ ಕರ್ತರೆಂದು ಭಾವಿಸಿ ಅವರ ಮೇಲೆ ದ್ವೇಷ ಸಾಧಿಸಿದ ಆರೋಪಿತರುಗಳು ಪೂರ್ವ ನಿಯೋಜಿತ ಒಳಸಂಚು ರೂಪಿಸಿ ಬೊಲೇರೋ ವಾಹನ ಮೂಲಕ ಗಂಗಾಧರ ಪಾಂಗಾಳ ರವರ ಸ್ಕೂಟರ್ ಗೆ ಉದ್ದೇಶ ಪೂರ್ವಕವಾಗಿ ಹಿಂದಿನಿಂದ ಹಿಂಬಾಲಿಸಿ ಬಂದು ಡಿಕ್ಕಿ ಹೊಡೆಸಿದ್ದು ಗಂಗಾಧರ ಪಾಂಗಾಳರವರು ಕೆಳಗೆ ಬಿದ್ದು ತಲೆ ,ಮೈ ಕೈಗೆ ಪೆಟ್ಟಾಗಿ ಮೃತಪಟ್ಟ ಬಗ್ಗೆ... ## Pages - [Blog](https://prathidina.com/?page_id=108) - [Home](https://prathidina.com/) [comment]: # (Generated by Hostinger Tools Plugin)